ರಾಹುಲ್ ಗಾಂಧಿ 
ದೇಶ

ಟ್ವೀಟ್ ಮಾಡುವ ಬದಲು ರಾಹುಲ್ ಕಾಂಗ್ರೆಸ್ ಸಿಎಂ ಗಳೊಂದಿಗೆ ಮಾತನಾಡಲಿ: ಕೋವಿಡ್ ಅಂಕಿ-ಅಂಶ ಆರೋಪ ಕುರಿತು ಬಿಜೆಪಿ

ಕೋವಿಡ್ ಗೆ ಬಲಿಯಾಗುತ್ತಿರುವವರ ಕುರಿತು ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಿಜೆಪಿ ತಿರುಗೇಟು ನೀಡಿದೆ. 

ನವದೆಹಲಿ: ಕೋವಿಡ್ ಗೆ ಬಲಿಯಾಗುತ್ತಿರುವವರ ಕುರಿತು ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಿಜೆಪಿ ತಿರುಗೇಟು ನೀಡಿದೆ. 

ಕೋವಿಡ್-19 ಸಂಬಂಧ ಟ್ವೀಟ್ ಮಾಡುವ ಬದಲು ರಾಹುಲ್ ಗಾಂಧಿ ಕಾಂಗ್ರೆಸ್ ನ ಮುಖ್ಯಮಂತ್ರಿಗಳೊಂದಿಗೆ ಮಾತನಾಡಲಿ ಎಂದು ಬಿಜೆಪಿ ತಿರುಗೇಟು ನೀಡಿದೆ. 

ಸರ್ಕಾರ ಕೋವಿಡ್-19 ಸಾವಿನ ಸಂಖ್ಯೆಯ ಕುರಿತು ಸುಳ್ಳು ಮಾಹಿತಿ ನೀಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.

ರಾಹುಲ್ ಗಾಂಧಿಗೆ ಏನೂ ಗೊತ್ತಿಲ್ಲ, ಆದರೂ ಎಲ್ಲದರ ಬಗ್ಗೆಯೂ ಮಾತನಾಡುತ್ತಾರೆ ಎಂದಿರುವ ಬಿಜೆಪಿ, ರಾಹುಲ್ ಗಾಂಧಿ ಅವರನ್ನು ಟೀಕಿಸಲು ಅತಿ ಹೆಚ್ಚು ಸಾವಿನ ಪ್ರಮಾಣ ಇರುವ ರಾಜ್ಯಗಳಾದ ಮಹಾರಾಷ್ಟ್ರಗಳಂತಹ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಬಗ್ಗೆ ಉಲ್ಲೇಖಿಸಿದೆ.

ಸಂಬಿತ್ ಪಾತ್ರ ಈ ಬಗ್ಗೆ ಟ್ವೀಟ್ ಮಾಡಿದ್ದು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಆಡಳಿತ ಪಕ್ಷದ ಭಾಗವಾಗಿದೆ, ಈ ರಾಜ್ಯದಲ್ಲಿ ಅತಿ ಹೆಚ್ಚು ಸಾವಿನ ಪ್ರಕರಣಗಳಿದೆ. ಇನ್ನು ಕಾಂಗ್ರೆಸ್ ಆಡಳಿತದಲ್ಲಿರುವ ಮತ್ತೊಂದು ರಾಜ್ಯ ರಾಜಸ್ಥಾನದಲ್ಲಿ ವಾಸ್ತವದಲ್ಲಿರುವ ಸಾವಿನ ಸಂಖ್ಯೆಗಳಿಗೂ ಸರ್ಕಾರ ತೋರಿಸುತ್ತಿರುವ ಸಾವಿನ ಸಂಖ್ಯೆಗಳಿಗೂ ವ್ಯತ್ಯಾಸವಿದೆ ಎಂದು ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರವನ್ನು ಟೀಕಿಸುವುದಕ್ಕೆ ಟ್ವಿಟರ್ ನಲ್ಲಿ ಬರೆಯುವುದರ ಬದಲು ರಾಹುಲ್ ಗಾಂಧಿ ಅವರ ಪಕ್ಷದ ಮುಖ್ಯಮಂತ್ರಿಗಳೊಂದಿಗೆ ಮಾತನಾಡಲಿ ಎಂದು ಸಂಬಿತ್ ಪಾತ್ರ ಸಲಹೆ ನೀಡಿದ್ದು, ತಪ್ಪು ಮಾಹಿತಿ ಹಾಗೂ ಸುಳ್ಳುಗಳನ್ನು ಹರಡುವುದು ಕಾಂಗ್ರೆಸ್ ನಾಯಕರ ಆದ್ಯತೆಯಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್