ಮಮತಾ ಬ್ಯಾನರ್ಜಿ-ಪ್ರಧಾನಿ ಮೋದಿ 
ದೇಶ

ಯಾಸ್ ಚಂಡಮಾರುತ: ಹಾನಿ ಕುರಿತು ಪ್ರಧಾನಿ ಮೋದಿಗೆ ವರದಿ ಸಲ್ಲಿಸಿದ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಯಾಸ್ ಚಂಡಮಾರುತದಿಂದಾಗಿ ಪಶ್ಚಿಮ ಬಂಗಾಳದಲ್ಲಿ ಸಂಭವಿಸಿರುವ ಹಾನಿಯ ಕುರಿತು ಸಿಎಂ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಕ್ರವಾರ ವರದಿ ಸಲ್ಲಿಸಿದ್ದಾರೆ.

ಕೋಲ್ಕತಾ: ಯಾಸ್ ಚಂಡಮಾರುತದಿಂದಾಗಿ ಪಶ್ಚಿಮ ಬಂಗಾಳದಲ್ಲಿ ಸಂಭವಿಸಿರುವ ಹಾನಿಯ ಕುರಿತು ಸಿಎಂ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಕ್ರವಾರ ವರದಿ ಸಲ್ಲಿಸಿದ್ದಾರೆ.

ಯಾಸ್ ಚಂಡಮಾರುತ ಹಿನ್ನಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಬಂಗಾಳದ ಪಶ್ಚಿಮ ಮೆದಿನಿಪುರ ಜಿಲ್ಲೆಯಲ್ಲಿ ಪರಿಶೀಲನಾ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಪಾಲ್ಗೊಂಡಿದ್ದ ಸಿಎಂ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚಂಡಮಾರುತದಿಂದಾಗಿ ರಾಜ್ಯದಲ್ಲಿ  ಸಂಭವಿಸಿರುವ ಹಾನಿಯ ಕುರಿತು ವರದಿ ಸಲ್ಲಿಕೆ ಮಾಡಿದ್ದಾರೆ.

ಈ ಸಭೆಗೂ ಮೊದಲು ಪ್ರಧಾನಿ ಮೋದಿ ಚಂಡಮಾರುತ ಪೀಡಿತ ಮತ್ತೊಂದು ರಾಜ್ಯ ಒಡಿಶಾಗೆ ತೆರಳಿ ಅಲ್ಲಿ ಚಂಡಮಾರುತ ಮತ್ತು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಶೀಲನಾ ಸಭೆ ನಡೆಸಿ ಮಾಹಿತಿ ಕಲೆಹಾಕಿದರು. ಕೇವಲ 15 ನಿಮಿಷಗಳಲ್ಲೇ ಈ ಎರಡೂ ಪರಿಶೀಲನಾ ಸಭೆಗಳು ಮುಕ್ತಾಯವಾಗಿದೆ ಎಂದು  ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!