ಸುಶೀಲ್ ಕುಮಾರ್ 
ದೇಶ

ದೊಣ್ಣೆ ಹಿಡಿದು ಸುಶೀಲ್ ಕುಮಾರ್ ಮತ್ತವರ ಸಹಚರರಿಂದ ವ್ಯಕ್ತಿ ಮೇಲೆ ಹಲ್ಲೆ: ವಿಡಿಯೋ ವೈರಲ್

ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಒಲಿಂಪಿಯನ್ ಕುಸ್ತಿಪಟು ಸುಶೀಲ್ ಕುಮಾರ್‌ ಮತ್ತು ಸಹಚರರು, ಕೆಲವು ವ್ಯಕ್ತಿಗಳಿಗೆ ದೊಣ್ಣೆಯಿಂದ ಹೊಡೆಯುತ್ತಿರುವ ದೃಶ್ಯದ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ

ನವದೆಹಲಿ: ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಒಲಿಂಪಿಯನ್ ಕುಸ್ತಿಪಟು ಸುಶೀಲ್ ಕುಮಾರ್‌ ಮತ್ತು ಸಹಚರರು, ಕೆಲವು ವ್ಯಕ್ತಿಗಳಿಗೆ ದೊಣ್ಣೆಯಿಂದ ಹೊಡೆಯುತ್ತಿರುವ ದೃಶ್ಯದ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ವ್ಯಕ್ತಿಯೊಬ್ಬ ಗಾಯದಿಂದ ಒದ್ದಾಡುತ್ತ ನೆಲಕ್ಕೆ ಉರುಳಿದ್ದಾನೆ. ಸುಶೀಲ್‌ ಕುಮಾರ್ ಮತ್ತು ಅವರ ಸಹಚರರು ದೊಣ್ಣೆಗಳಿಂದ ಹೊಡೆಯುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ. 

ವಿಡಿಯೋದ ನೈಜತೆಯ ಕುರಿತಂತೆ ದೆಹಲಿ ಪೊಲೀಸರು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಛತ್ರಸಾಲಾ ಕ್ರೀಡಾಂಗಣದಲ್ಲಿ ನಡೆದಿದ್ದ ಜಗಳದಲ್ಲಿ ಹಲ್ಲೆಗೊಳಗಾಗಿದ್ದ 23 ವರ್ಷದ ಕುಸ್ತಿಪಟು ಸಾಗರ್ ಅಸುನೀಗಿದ್ದರು. ಇದೇ ಪ್ರಕರಣದಲ್ಲಿ ಸುಶೀಲ್‌ ಕುಮಾರ್‌ ಸೇರಿದಂತೆ ಈವರೆಗೆ ಒಟ್ಟು ಎಂಟು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಹಲ್ಲೆಯಲ್ಲಿ ಸಾಗರ್‌ ಸಾವಿಗೀಡಾದರೆ, ಅವರ ಇಬ್ಬರು ಸ್ನೇಹಿತರು ಗಂಭೀರ ಗಾಯಗೊಂಡಿದ್ದರು. ಮಾಡೆಲ್‌ ಟೌನ್‌ ಪ್ರದೇಶದಲ್ಲಿನ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮೇ 4ರ ರಾತ್ರಿ ಜಗಳ ನಡೆದಿತ್ತು. ಭಾನುವಾರ, ಸುಶೀಲ್‌ ಕುಮಾರ್‌ ಅವರನ್ನು ಬಂಧಿಸಲಾಯಿತು. ಅವರ ಸಹಚರರಾದ ಭೂಪೇಂದರ್‌ (38), ಮೋಹಿತ್‌ (22), ಗುಲಾಬ್‌ (24) ಅವರನ್ನು
ಹರಿಯಾಣದ ಝಜ್ಜರ್‌ ಜಿಲ್ಲೆಯಿಂದ ಹಾಗೂ ರೋಹ್ಟಕ್‌ನಿಂದ ಮಂಜೀತ್‌ (29) ಎಂಬುವವರನ್ನು ಬಂಧಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!