ದೇಶ

ವೈದ್ಯರ ನಿರ್ಲಕ್ಷ್ಯದಿಂದ ಕೊರೋನಾ ಸೋಂಕಿತ ಮಗ ಸಾವು, ಎಫ್ಐಆರ್ ದಾಖಲಿಸಿಕೊಳ್ಳಲು ಪೊಲೀಸರ ನಕಾರ: ಬಿಜೆಪಿ ಶಾಸಕನ ಆರೋಪ

Manjula VN

ಹರ್ದೊಯ್: ವೈದ್ಯರ ನಿರ್ಲಕ್ಷ್ಯದಿಂದ ಪುತ್ರ ಸಾವನ್ನಪ್ಪಿದ್ದು, ಈ ಸಂಬಂಧ ಕಳೆದೊಂದು ತಿಂಗಳಿನಿಂದ ಖಾಸಗಿ ಆಸ್ಪತ್ರೆಯ ವಿರುದ್ಧ ದೂರು ನೀಡಿದರೂ, ಉತ್ತರ ಪ್ರದೇಶದ ಪೊಲೀಸರು ಎಫ್‌ಐಆರ್ ದಾಖಲಿಸುತ್ತಿಲ್ಲ ಉತ್ತರಪ್ರದೇಶದ ಬಿಜೆಪಿ ಶಾಸಕರೊಬ್ಬರು ಆರೋಪಿಸಿದ್ದಾರೆ.

ಹರ್ದೊಯ್ ಜಿಲ್ಲೆಯ ಸಂಡಿಲಾದ ಬಿಜೆಪಿ ಶಾಸಕ ರಾಜ್‌ಕುಮಾರ್ ಅಗರವಾಲ್ ಅವರ ಪುತ್ರ ಆಶಿಶ್, ಕೋವಿಡ್ ಸೋಂಕು ತಗುಲಿ ಏಪ್ರಿಲ್ 26ರಂದು ಕಾಕೋರಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಏಪ್ರಿಲ್ 26ರ ಬೆಳಗ್ಗೆ ಆಮ್ಲಜನಕ ಮಟ್ಟವು 94 ಆಗಿತ್ತು. ಅವರು ಆಹಾರ ಸೇವಿಸುತ್ತಿದ್ದರು ಮತ್ತು ನಮ್ಮೊಂದಿಗೆ ನಿಯಮಿತವಾಗಿ ಮಾತನಾಡುತ್ತಿದ್ದರು. ಇದ್ದಕ್ಕಿದ್ದಂತೆ ಸಂಜೆಯ ವೇಳೆಗೆ ಆಮ್ಲಜನಕ ಮಟ್ಟ ಕಡಿಮೆಯಾಗುತ್ತಿದೆ ಎಂದು ವೈದ್ಯರು ಹೇಳಿದರು. ನಾವು ಹೊರಗಿನಿಂದ ಆಮ್ಲಜನಕ ಸಿಲಿಂಡರ್ ಅನ್ನು ವ್ಯವಸ್ಥೆಗೊಳಿಸಿದೆವು. ಆದರೆ ವೈದ್ಯರು ಆಮ್ಲಜನಕವನ್ನು ರೋಗಿಗೆ ಒದಗಿಸಲು ಅನುಮತಿ ನೀಡಲಿಲ್ಲ. ಹೀಗಾಗಿ ಪುತ್ರ ನಿಧನ ಹೊಂದಿದ್ದೆ ಎಂದು ಆರೋಪಿಸಿದ್ದಾರೆ.

ಆ ದಿನ ಆಸ್ಪತ್ರೆಯಲ್ಲಿ ಏಳು ಮಂದಿ ಮತಪಟ್ಟಿದ್ದಾರೆ. ನಾನು ಮುಖ್ಯಮಂತ್ರಿ, ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರು ಹಾಗೂ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ನೀಡಿದ್ದೆ. ಆದರೂ ದೂರು ದಾಖಲಿಸಲಿಲ್ಲ. ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲಿಸಬೇಕು ಮತ್ತು ನನ್ನ ಮಗನ ಸಾವಿಗೆ ಯಾರು ಕಾರಣ ಎಂಬುದನ್ನು ಕಂಡುಹಿಡಿಯಬೇಕು. ತಪ್ಪಿತಸ್ಥ ವೈದ್ಯರಿಗೆ ಶಿಕ್ಷೆಯಾಗಬೇಕು ಎಂಬುದು ನನ್ನ ಬೇಡಿಕೆಯಾಗಿದೆ ಎಂದು ಆಗ್ರಹಿಸಿದ್ದಾರೆ.

SCROLL FOR NEXT