ದೇಶ

ಕೋವಿಡ್-19; ಒಂದೇ ದಿನ 1.65 ಲಕ್ಷ ಹೊಸ ಸೋಂಕು ಪ್ರಕರಣ ವರದಿ, 3,460 ಸಾವು!

Srinivasamurthy VN

ನವದೆಹಲಿ: ದೇಶಾದ್ಯಂತ ಅಬ್ಬರಿಸಿದ್ದ ಮಾರಕ ಕೊರೋನಾ ಸೋಂಕಿನ ಪ್ರಮಾಣ ಕೊಂಚ ತಗ್ಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 1.65ಲಕ್ಷಕ್ಕೂ ಅಧಿಕ ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದ್ದು, 3,460 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ  ನೀಡಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 1,65,553 ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 2,78,94,800ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ 3,460 ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ  3,25,972 ಕ್ಕೆ ಏರಿಕೆಯಾಗಿದೆ. 

ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 2,76,309 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ ಗುಣಮುಖರ ಸಂಖ್ಯೆ 2,54,54,320ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 21,14,508  ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ 20,63,839 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಮೂಲಕ ಒಟ್ಟಾರೆ ಕೋವಿಡ್ ಪರೀಕ್ಷೆಗಳ ಸಂಖ್ಯೆ 34,31,83,748ಕ್ಕೆ ಏರಿಕೆಯಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಅಂತೆಯೇ ಈ ವರೆಗೂ 21,20,66,614 ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ  ಎಂದು ತಿಳಿದುಬಂದಿದೆ. 

ಸತತ 6ನೇ ದಿನ ಸೋಂಕು ಸಕಾರಾತ್ಮಕ ದರ ಶೇ.10ಕ್ಕಿಂತ ಕಡಿಮೆ
ಇನ್ನು ದೇಶದಲ್ಲಿ ಸತತ ಆರನೇ ದಿನವೂ ಸೋಂಕು ಸಕಾರಾತ್ಮಕ ದರ ಶೇ.10ಕ್ಕಿಂತ ಕಡಿಮೆ ಇದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

SCROLL FOR NEXT