ದೇಶ

'ಬಾಬಾ ರಾಮದೇವ್ ಜನರಲ್ಲಿ ಸುಳ್ಳು ಮಾಹಿತಿಗಳನ್ನು ಹಬ್ಬಿಸುತ್ತಿದ್ದಾರೆ': ಯೋಗ ಗುರು ವಿರುದ್ಧ ಪಶ್ಚಿಮ ಬಂಗಾಳದಲ್ಲಿ ದೂರು ದಾಖಲು

Sumana Upadhyaya

ಕೋಲ್ಕತ್ತಾ: ಆಧುನಿಕ ವೈದ್ಯಕೀಯ ಪದ್ಧತಿಯಲ್ಲಿ ಕೋವಿಡ್ ಸೋಂಕನ್ನು ಗುಣಪಡಿಸಲು ಸಾಧ್ಯವಾಗದಿರುವುದರಿಂದ ವೈದ್ಯರು ಸೇರಿದಂತೆ ಹಲವು ಕೋವಿಡ್ ಸೋಂಕಿತರು ಬಲಿಯಾಗುತ್ತಿದ್ದಾರೆ ಎಂದು ಹೇಳಿಕೆ ನೀಡಿದ ಯೋಗ ಗುರು ರಾಮದೇವ್ ವಿರುದ್ಧ ಭಾರತೀಯ ವೈದ್ಯಕೀಯ ಸಂಘದ ಪಶ್ಚಿಮ ಬಂಗಾಳ ವಿಭಾಗ ಪೊಲೀಸರಿಗೆ ದೂರು ಸಲ್ಲಿಸಿದೆ.

ಕೋಲ್ಕತ್ತಾದ ಸಿಂತಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿರುವ ಸಂಘ, ಸುಳ್ಳು ಮತ್ತು ದಾರಿತಪ್ಪಿಸುವ ಹೇಳಿಕೆಗಳ ಮೂಲಕ ಬಾಬಾ ರಾಮ್ ದೇವ್ ಈ ಕೊರೋನಾ ಸಾಂಕ್ರಾಮಿಕ ಸಮಯದಲ್ಲಿ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಹೇಳಿದೆ.

ಆಧುನಿಕ ಅಲೋಪತಿ ಔಷಧಿಗಳಿಂದ ಕೊರೋನಾವನ್ನು ಗುಣಪಡಿಸಲು ಸಾಧ್ಯವಾಗುತ್ತಿಲ್ಲ, ಇದರಿಂದಾಗಿ ಹೆಚ್ಚೆಚ್ಚು ಜನರು ಸಾಯುತ್ತಿದ್ದಾರೆ ಎಂದು ರಾಮದೇವ್ ಹೇಳಿದ್ದರು. ಕೊರೋನಾ ಲಸಿಕೆಯ ಎರಡೂ ಡೋಸ್ ಗಳನ್ನು ಪಡೆದ ನಂತರ 10 ಸಾವಿರಕ್ಕೂ ಹೆಚ್ಚು ವೈದ್ಯರು ಮೃತಪಟ್ಟಿದ್ದಾರೆ ಎಂದು ಕೂಡ ಹೇಳಿದ್ದಾರೆ. ಅದು ಖಂಡಿತಾ ಸತ್ಯಕ್ಕೆ ದೂರವಾದ ಮಾತು ಎಂದು ನಿನ್ನೆ ಕೋಲ್ಕತ್ತಾದಲ್ಲಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಹೇಳಿದ್ದಾರೆ.

ಈ ರೀತಿ ಜನರನ್ನು ದಾರಿತಪ್ಪಿಸುವ ತಪ್ಪು ಮಾಹಿತಿಗಳನ್ನು ಹಬ್ಬಿಸುವ ಮೂಲಕ ಕೊರೋನಾ ಸಾಂಕ್ರಾಮಿಕ ಸಮಯದಲ್ಲಿ ಜನರ ದಾರಿತಪ್ಪಿಸುತ್ತಿದ್ದಾರೆ, ಇದು ಖಂಡಿತಾ ಗಂಭೀರ ಅಪರಾಧ ಎಂದು ದೂರಿನಲ್ಲಿ ಹೇಳಲಾಗಿದೆ.

ಕೋವಿಡ್-19 ಅಲೋಪತಿ ಔಷಧಿಗಳನ್ನು ತೆಗೆದುಕೊಳ್ಳುವ ಮೂಲಕ ಲಕ್ಷಾಂತರ ಜನ ಕೊರೋನಾಕ್ಕೆ ಬಲಿಯಾಗಿದ್ದಾರೆ ಎಂದು ಬಾಬಾ ರಾಮ್ ದೇವ್ ಹೇಳಿರುವ ವಿಡಿಯೊ ಸಾಕಷ್ಟು ವೈರಲ್ ಆಗಿದೆ.

SCROLL FOR NEXT