ಸಂಗ್ರಹ ಚಿತ್ರ 
ದೇಶ

ಕೋವಿಡ್-19: ಭಾರತದಲ್ಲಿಂದು 1.52 ಲಕ್ಷ ಕೇಸ್ ಪತ್ತೆ, 50 ದಿನಗಳಲ್ಲೇ ಅತಿ ಕಡಿಮೆ!

ಭಾರತದಲ್ಲಿ ಕೊರೋನಾ 2ನೇ ಅಲೆ ಅಬ್ಬರ ದಿನದಿಂದ ದಿನಕ್ಕೆ ತಗ್ಗುತ್ತಿದೆ. ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 1,52,734 ಕೋವಿಡ್ ಪ್ರಕರಣಗಳು ದೃಢಪಟ್ಟಿದೆ. ಇದು ಕಳೆದ 50 ದಿನಗಳಲ್ಲಿಯೇ ಕನಿಷ್ಟ ಸಂಖ್ಯೆಯಾಗಿದೆ. ಇದೇ ವೇಳೆ ಒಂದೇ ದಿನ 3,128 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ನವದೆಹಲಿ: ಭಾರತದಲ್ಲಿ ಕೊರೋನಾ 2ನೇ ಅಲೆ ಅಬ್ಬರ ದಿನದಿಂದ ದಿನಕ್ಕೆ ತಗ್ಗುತ್ತಿದೆ. ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 1,52,734 ಕೋವಿಡ್ ಪ್ರಕರಣಗಳು ದೃಢಪಟ್ಟಿದೆ. ಇದು ಕಳೆದ 50 ದಿನಗಳಲ್ಲಿಯೇ ಕನಿಷ್ಟ ಸಂಖ್ಯೆಯಾಗಿದೆ. ಇದೇ ವೇಳೆ ಒಂದೇ ದಿನ 3,128 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,80,47,534ಕ್ಕೆ ಏರಿಕೆಯಾಗಿದೆ. ಒಟ್ಟು ಸಾವಿಗೀಡಾದವರ ಸಂಖ್ಯೆ 3,29,100ಕ್ಕೆ ತಲುಪಿದೆ. 

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 20,26,092ಕ್ಕೆ ಏರಿಕೆಯಾಗಿದೆ. 

ಈ ನಡುವೆ ಕಳೆದ 24 ಗಂಟೆಗಳಲ್ಲಿ 2,38,022 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,56,92,342ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 16,83,135 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 34,48,66,883 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 21,31,54,129 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ ವಿರೋಧಿ ಪ್ರತಿಭಟನೆಗಳಿಗೆ ಅಮೆರಿಕನ್ನರ ಆರ್ಥಿಕ ನೆರವು?'; Mary Millben ಸ್ಫೋಟಕ ಆರೋಪ!

‘ಮೋದಿಗೆ ಅಮೆರಿಕ ಬೇಕಿಲ್ಲ, ಆದರೆ ಅಮೆರಿಕಕ್ಕೆ ಮೋದಿ ಬೇಕು'.. 'ನಿಮ್ಮನ್ನು ಬಳಸಿಕೊಂಡು ಕೈ ಬಿಡುತ್ತಾರೆ': ಅಭಿಜಿತ್ ದೀಪ್ಕೆಗೆ ಹಾಲಿವುಡ್ ಗಾಯಕಿ ಎಚ್ಚರಿಕೆ

CJP ಪ್ರತಿಭಟನೆಯಲ್ಲಿ ಭಾಗಿ: ನಟ Imran Khanಗೆ ಮುಂಬೈ ಪೊಲೀಸರಿಂದ 'Leave India' ನೋಟಿಸ್, ಅ.28ರೊಳಗೆ ಭಾರತ ತೊರೆಯುವಂತೆ ಗಡುವು..!

ಜಿಯೋ - ಸ್ಟಾರ್‌ಲಿಂಕ್‌, ಸ್ಟಾರ್ ವಾರ್ ಹಿಂದಿನ ಆರ್ಥಿಕತೆ! (ಹಣಕ್ಲಾಸು)

ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡರೆ ಮೀಸಲಾತಿ ಸೌಲಭ್ಯ ಸಿಗಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!