ಆನ್ಸಿ ಕಬೀರ್ ಹಾಗೂ ಅಂಜನಾ ಶಾಜಹಾನ್ 
ದೇಶ

ಕೇರಳ ರಸ್ತೆ ಅಪಘಾತ: ಮಿಸ್ ಸೌತ್ ಇಂಡಿಯಾ ಆನ್ಸಿ, ಮಾಜಿ ಮಿಸ್ ಕೇರಳ ರನ್ನರ್ ಅಪ್ ಅಂಜನಾ ಸಾವು

ಸೋಮವಾರ ಮುಂಜಾನೆ ಕೊಚ್ಚಿಯ ವೈಟ್ಟಿಲ್ಲಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಿಸ್ ಸೌತ್ ಇಂಡಿಯಾ ಹಾಗೂ ಮಾಜಿ ಮಿಸ್ ಕೇರಳ ಆನ್ಸಿ ಕಬೀರ್ ಹಾಗೂ ಮಾಜಿ ಮಿಸ್ ಕೇರಳ ರನ್ನರ್ ಅಪ್ ಅಂಜನಾ ಶಾಜಹಾನ್ ಸಾವನ್ನಪ್ಪಿದ್ದಾರೆ.

ಕೊಚ್ಚಿ: ಸೋಮವಾರ ಮುಂಜಾನೆ ಕೊಚ್ಚಿಯ ವೈಟ್ಟಿಲ್ಲಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಿಸ್ ಸೌತ್ ಇಂಡಿಯಾ ಹಾಗೂ ಮಾಜಿ ಮಿಸ್ ಕೇರಳ ಆನ್ಸಿ ಕಬೀರ್ ಹಾಗೂ ಮಾಜಿ ಮಿಸ್ ಕೇರಳ ರನ್ನರ್ ಅಪ್ ಅಂಜನಾ ಶಾಜಹಾನ್ ಸಾವನ್ನಪ್ಪಿದ್ದಾರೆ.

ಆನ್ಸಿ ತಿರುವನಂತಪುರಂ ಜಿಲ್ಲೆಯ ಅಲಂಕೋಡ್‌ ಮೂಲದವರಾಗಿದ್ದು, ಅಂಜನಾ ತ್ರಿಶೂರ್‌ ಮೂಲದವರಾಗಿದ್ದಾರೆ.

ವೈಟಿಲ್ಲಾ ಮತ್ತು ಪಲರಿವಟ್ಟಂ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಲಿಡೇ ಇನ್ ಹೋಟೆಲ್ ಬಳಿ ಮಧ್ಯರಾತ್ರಿ 1.30 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಆನ್ಸಿ ಮತ್ತು ಅಂಜನಾ ಪ್ರಯಾಣಿಸುತ್ತಿದ್ದ ಕಾರು ವೈಟಿಲ ಕಡೆಯಿಂದ ಬರುತ್ತಿದ್ದಾಗ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಮರಕ್ಕೆ ಡಿಕ್ಕಿ ಹೊಡೆದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಆನ್ಸಿ ಮತ್ತು ಅಂಜನಾ  ಜೊತೆತ್ರಿಶೂರ್ ಮೂಲದ ಅಬ್ದುಲ್ ರೆಹಮಾನ್ ಮತ್ತು ಮುಹಮ್ಮದ್ ಆಸಿಫ್ ಕೂಡ ಕಾರಿನಲ್ಲಿದ್ದರು. ಗಂಭೀರ ಗಾಯಗೊಂಡ ಇಬ್ಬರನ್ನೂ ಎರ್ನಾಕುಲಂ ಮೆಡಿಕಲ್ ಸೆಂಟರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆನ್ಸಿ ಮತ್ತು ಅಂಜನಾ ಆಸ್ಪತ್ರೆಯಲ್ಲಿ ಮೃತಪಟ್ಟರು. ದ್ವಿಚಕ್ರ ವಾಹನದಲ್ಲಿದ್ದ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ.  ಅಂಗಡಿಗಳಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಕಾರು ಅತಿವೇಗದಲ್ಲಿ ಚಲಿಸುತ್ತಿತ್ತು,   ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಆನ್ಸಿ 2019 ರಲ್ಲಿ ಮಿಸ್ ಕೇರಳ ಪ್ರಶಸ್ತಿಯನ್ನು ಗೆದ್ದಿದ್ದರು, ಮತ್ತು ಅಂಜನಾ ಈವೆಂಟ್‌ನಲ್ಲಿ ರನ್ನರ್ ಅಪ್ ಆಗಿದ್ದರು. ಈ ವರ್ಷದ ಆಗಸ್ಟ್‌ನಲ್ಲಿ ಆನ್ಸಿ ಮಿಸ್ ಸೌತ್ ಇಂಡಿಯಾ ಪ್ರಶಸ್ತಿ ಪಡೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

ಚಿಂತಾಮಣಿಯ Dictator, ನಿನ್ನ ವಿರುದ್ಧ ಸಮರ ನಿರಂತರ: ಎಂಸಿ ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಮತ್ತೆ ಕಿಡಿ

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ, ಕಾರು ಆಪೋಷನ, ಕೂದಲೆಳೆ ಅಂತರದಲ್ಲಿ ಚಾಲಕ ಬಚಾವ್-Video