ಕೇಂದ್ರ ಆರೋಗ್ಯ ಸಚಿವರ ಸಭೆ 
ದೇಶ

ದೆಹಲಿಯಲ್ಲಿ ಡೆಂಗ್ಯೂ ಪರಿಸ್ಥಿತಿ ಪರಿಶೀಲಿಸಿದ ಕೇಂದ್ರ ಆರೋಗ್ಯ ಸಚಿವರು; ಪ್ರಕರಣಗಳು ಹೆಚ್ಚುತ್ತಿರುವ ರಾಜ್ಯಗಳಿಗೆ ಕೇಂದ್ರ ತಂಡ

ದೆಹಲಿಯಲ್ಲಿನ ಡೆಂಗ್ಯೂ ಪರಿಸ್ಥಿತಿಯನ್ನು ಅವಲೋಕಿಸಿದ  ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು, ರಾಷ್ಟ್ರ ರಾಜಧಾನಿಗೆ ಕೇಂದ್ರ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಭರವಸೆ ನೀಡಿದ್ದಾರೆ.

ನವದೆಹಲಿ: ದೆಹಲಿಯಲ್ಲಿನ ಡೆಂಗ್ಯೂ ಪರಿಸ್ಥಿತಿಯನ್ನು ಅವಲೋಕಿಸಿದ  ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು, ರಾಷ್ಟ್ರ ರಾಜಧಾನಿಗೆ ಕೇಂದ್ರ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಭರವಸೆ ನೀಡಿದ್ದಾರೆ.

ಡೆಂಗ್ಯೂ ಸಕ್ರಿಯ ಪ್ರಕರಣಗಳು ಹೆಚ್ಚಿರುವ ರಾಜ್ಯಗಳಿಗೆ ತಜ್ಞರ ತಂಡವನ್ನು ಗುರುತಿಸಿ ರಾಜ್ಯಗಳಿಗೆ ಕಳುಹಿಸುವಂತೆ ಕೇಂದ್ರ ಆರೋಗ್ಯ ಕಾರ್ಯದರ್ಶಿಗೆ ಸೋಮವಾರ ಸೂಚಿಸಿದ್ದಾರೆ.

ಮಾಂಡವಿಯಾ ಅವರು ಡೆಂಗ್ಯೂ ನಿಯಂತ್ರಣ ಮತ್ತು ನಿರ್ವಹಣೆಗಾಗಿ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಪರಿಶೀಲಿಸಲು ದೆಹಲಿ ಸರ್ಕಾರದೊಂದಿಗೆ ಇಂದು ಉನ್ನತ ಮಟ್ಟದ ಸಭೆ ನಡೆಸಿದರು.

"ದೆಹಲಿಯಲ್ಲಿ ಡೆಂಗ್ಯೂ ಪರಿಸ್ಥಿತಿಯನ್ನು ಪರಿಶೀಲಿಸಲಾಗಿದೆ ಮತ್ತು ಕೇಂದ್ರ ಸರ್ಕಾರ ಸಂಪೂರ್ಣ ಬೆಂಬಲ ನೀಡುವ ಭರವಸೆ ನೀಡಿದೆ" ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.

"ರೋಗವನ್ನು ನಿಗ್ರಹಿಸಲು ಹಾಟ್‌ಸ್ಪಾಟ್ ಗುರುತಿಸುವಿಕೆ, ಫಾಗಿಂಗ್ ಮತ್ತು ಸಕಾಲಿಕ ಚಿಕಿತ್ಸೆಯಂತಹ ಆನ್-ಗ್ರೌಂಡ್ ಉಪಕ್ರಮಗಳನ್ನು ಕೈಗೊಳ್ಳಲಾಗುವುದು. ಕೇಂದ್ರವು ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ರಾಜ್ಯಗಳಿಗೆ ತಜ್ಞರ ತಂಡವನ್ನು ಕಳುಹಿಸುತ್ತಿದೆ" ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂದು ದೆಹಲಿಯಲ್ಲಿ ಚುನಾವಣೆ ನಡೆಸಿ... BJP 10 ಸ್ಥಾನ ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ: ಕೇಜ್ರಿವಾಲ್ ಸವಾಲು

ಹುಬ್ಬಳ್ಳಿ: ಕರ್ನಾಟಕದ ವಿರುದ್ಧ ಗೆದ್ದು ಚೊಚ್ಚಲ Ranji Trophy ತೆಗೆದುಕೊಂಡು ಹೋಗ್ತೀವಿ - ಜಮ್ಮು-ಕಾಶ್ಮೀರ ಸಿಎಂ

T20 World Cup 2026: ಇಂಗ್ಲೆಂಡ್ ವಿರುದ್ಧ ಗೆಲ್ಲುವ ಪಂದ್ಯ ಕೈಚೆಲ್ಲಿದ ಕಿವೀಸ್, ಪಾಕ್ ಸೆಮಿಸ್ ಕನಸು ಜೀವಂತ!

Ranji Final: ಚೊಚ್ಚಲ ಪ್ರಶಸ್ತಿ ಗೆಲುವಿನ ಸನಿಹದಲ್ಲಿ ಜಮ್ಮು-ಕಾಶ್ಮೀರ; ತವರಿನಲ್ಲೇ ಕರ್ನಾಟಕಕ್ಕೆ ದೊಡ್ಡ ಹಿನ್ನಡೆ!

ಈ ರಸ್ತೆ ಮುಸ್ಲಿಮರಿಗಲ್ಲ: ಡೆಹ್ರಾಡೂನ್-ದೆಹಲಿ ಎಕ್ಸ್‌ಪ್ರೆಸ್‌ವೇಯಲ್ಲಿ ಯುವತಿಯರು ಬರೆಯುತ್ತಿರುವ ವಿಡಿಯೋ ವೈರಲ್!

SCROLL FOR NEXT