ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಮುಂದುವರೆದ ಕೊರೋನಾ ಏರಿಳಿಕೆ: ದೇಶದಲ್ಲಿಂದು 10,423 ಹೊಸ ಕೇಸ್ ಪತ್ತೆ, 443 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 10,423 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 443 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 10,423 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 443 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಮಂಗಳವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,42,96,237ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,58,880ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,53,776ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 15,021 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,36,83,581ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 10,09,045 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 61,02,10,339 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ  1,06,85,71,879 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಎಲ್ಲಾ ಪ್ರತಿಭಟನೆಗಳೂ ಒಂದೇ: 'ಚಾಯ್ ಪೆ ಚರ್ಚೆ' ಗೂ ಮುನ್ನ ರಾಹುಲ್ ಹೇಳಿಕೆ!

ನಟ ದರ್ಶನ್‌ಗೆ ಕಂಟಕವಾಗ್ತಾರಾ ದೋಸ್ತಿಗಳು? ಕೋರ್ಟ್‌ನಲ್ಲಿ ಗಾಬರಿ ಬಿದ್ದ ಚಿಕ್ಕಣ್ಣ, ಯಶಸ್ ಸೂರ್ಯ ಹೇಳಿದ್ದೇನು?

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಶನ್: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪೆನ್ ಡ್ರೈವ್ ಸಲ್ಲಿಕೆ; ನ್ಯಾಯಾಂಗ ತನಿಖೆಗೆ ಆಗ್ರಹ!

ವರ್ತಕರ ಮನವಿಗೆ ಸ್ಪಂದಿಸಿದ ಕೇಂದ್ರ; ದೀಪಾವಳಿ ನಂತರವೇ UPI ಮರ್ಚೆಂಟ್ ಶುಲ್ಕ ಜಾರಿ