ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಜತೆ ಜಿ ಸುಧಾ 
ದೇಶ

ಆಂಧ್ರ ಉಪ ಚುನಾವಣೆ: ವೈಎಸ್‌ಆರ್‌ ಕಾಂಗ್ರೆಸ್ ಅಭ್ಯರ್ಥಿ 90 ಸಾವಿರ ಮತಗಳ ಅಂತರದಿಂದ ಗೆಲುವು; ಕಾಂಗ್ರೆಸ್, ಬಿಜೆಪಿಗೆ ಠೇವಣಿ ನಷ್ಟ

ಆಂಧ್ರ ಪ್ರದೇಶದ ಬದ್ವೇಲ್ (ಎಸ್‌ಸಿ) ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಆಡಳಿತಾರೂಢ ವೈಎಸ್‌ಆರ್‌ ಕಾಂಗ್ರೆಸ್ ಅಭ್ಯರ್ಥಿ 90 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸುವ ಮೂಲಕ...

ಕಡಪ: ಆಂಧ್ರ ಪ್ರದೇಶದ ಬದ್ವೇಲ್ (ಎಸ್‌ಸಿ) ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಆಡಳಿತಾರೂಢ ವೈಎಸ್‌ಆರ್‌ ಕಾಂಗ್ರೆಸ್ ಅಭ್ಯರ್ಥಿ 90 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸುವ ಮೂಲಕ ಕ್ಷೇತ್ರವನ್ನು ಉಳಿಸಿಕೊಂಡಿದೆ. ಆದರೆ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಠೇವಣಿ ಕಳೆದುಕೊಂಡಿವೆ.

ವೈಎಸ್‌ಆರ್‌ ಕಾಂಗ್ರೆಸ್ ಅಭ್ಯರ್ಥಿ ಡಾ ಜಿ ಸುಧಾ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಪಿ ಸುರೇಶ್ ವಿರುದ್ಧ ಮೊದಲ ಸುತ್ತಿನಿಂದಲೇ ಮುನ್ನಡೆ ಕಾಯ್ದುಕೊಂಡರು. ಪ್ರಮುಖ ಪ್ರತಿಪಕ್ಷವಾದ ಟಿಡಿಪಿ ಮತ್ತು ಜನಸೇನಾ ಪಕ್ಷಗಳು ಉಪಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ.

ಈ ವರ್ಷದ ಮಾರ್ಚ್‌ನಲ್ಲಿ ವೈಎಸ್‌ಆರ್‌ಸಿ ಶಾಸಕ ಡಾ ಜಿ ವೆಂಕಟಸುಬ್ಬಯ್ಯ ಅವರ ನಿಧನದಿಂದ ತೆರವಾಗಿದ್ದ ಬದ್ವೇಲ್ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು, ವೆಂಕಟಸುಬ್ಬಯ್ಯ ಅವರ ಪತ್ನಿ ಡಾ.ಸುಧಾ ಅವರು ಉಪಚುನಾವಣೆಯಲ್ಲಿ ವೈಎಸ್ ಆರ್ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದರು. ಬಿಜೆಪಿ ಯುವ ಮುಖಂಡ ಪಿ.ಸುರೇಶ್ ಅವರನ್ನು ಕಣಕ್ಕಿಳಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT