ಸಾಂದರ್ಭಿಕ ಚಿತ್ರ 
ದೇಶ

ಮೆಟ್ರೊ ನಗರಗಳಲ್ಲಿ ಹೆಚ್ಚಿದ ಉದ್ಯೋಗ ನೇಮಕಾತಿ: ಗ್ರಾಮೀಣ ಭಾರತದಲ್ಲಿ ನಿರುದ್ಯೋಗ ಹೆಚ್ಚಳ

ನಾಲ್ಕು ತಿಂಗಳ ಹಿಂದೆ ನಗರ ಪ್ರದೇಶಗಳಲ್ಲಿ ನಿರುದ್ಯೋಗ ಪ್ರಮಾಣ ಶೇ.7.75ರಷ್ಟಿತ್ತು. ಈಗ ಆ ಪ್ರಮಾಣ ಶೇ.7.38ಕ್ಕೆ ಕುಸಿದಿದೆ. 

ನವದೆಹಲಿ: ಕೊರೊನಾ ನಂತರ ಲಾಕ್ ಡೌನ್ ಹಿಂಪಡೆಕೊಂಡಿರುವುದರಿಂದ ಹಾಗೂ ಸಾಲು ಸಾಲು ಹಬ್ಬಗಳಿಂದಾಗಿ ನಗರಪ್ರದೇಶಗಳಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದ್ದು, ಉದ್ಯೋಗಾವಕಾಶಗಳು ಮತ್ತೆ ಏರುಗತಿಯಲ್ಲಿ ಸಾಗಿದೆ. ಅದರ ಪರಿಣಾಮವಾಗಿ ದೇಶಾದ್ಯಂತ ನೇಮಕಾತಿ ಪ್ರಮಾಣವೂ ಹೆಚ್ಚುತ್ತಿರುವ ಬೆಳವಣಿಗೆ ಅಧ್ಯಯನದಿಂದ ಬೆಳಕಿಗೆ ಬಂದಿದೆ. 

ಇದೇ ವೇಳೆ ಗ್ರಾಮೀಣ ಭಾಗದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚುತ್ತಿರುವುದು ಕಳವಳ ಹುಟ್ಟಿಸಿದೆ. ನಾಲ್ಕು ತಿಂಗಳ ಹಿಂದೆ ನಗರ ಪ್ರದೇಶಗಳಲ್ಲಿ ನಿರುದ್ಯೋಗ ಪ್ರಮಾಣ ಶೇ.7.75ರಷ್ಟಿತ್ತು. ಈಗ ಆ ಪ್ರಮಾಣ ಶೇ.7.38ಕ್ಕೆ ಕುಸಿದಿದೆ. 

ನಾಲ್ಕು ತಿಂಗಳ ಕೆಳಗೆ ಗ್ರಾಮೀಣ ಪ್ರದೇಶದಲ್ಲಿ ನಿರುದ್ಯೋಗ ಪ್ರಮಾಣ ಶೇ.6.86ರಷ್ಟಿತ್ತು. ಈಗ ಈ ಪ್ರಮಾಣ ಶೇ.7.91ಕ್ಕೆ ಏರಿಕೆಯಾಗಿದೆ. ನಗರಪ್ರದೇಶಗಳಲ್ಲಿ ಉದ್ಯೋಗಾವಕಾಶ ಹೆಚ್ಚಳಕ್ಕೆ ಐಟಿ ಕ್ಷೇತ್ರದಲ್ಲಿನ ಪ್ರಗತಿ ಕಾರಣ ಎಂದು ಪರಿಣತರು ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT