ಬೆಂಕಿ ಅವಘಡದ ದೃಶ್ಯ 
ದೇಶ

ಮಹಾರಾಷ್ಟ್ರ: ಅಹ್ಮದ್ ನಗರದ ಸಿವಿಲ್ ಆಸ್ಪತ್ರೆಯಲ್ಲಿ ಬೃಹತ್ ಬೆಂಕಿ ಅವಘಡ: ಕನಿಷ್ಠ 10 ರೋಗಿಗಳು ಸಾವು, ಹಲವರಿಗೆ ಗಾಯ 

ಮಹಾರಾಷ್ಟ್ರದ ಅಹ್ಮದ್ ನಗರದ ಸಿವಿಲ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಸಂಭವಿಸಿದ ಬೃಹತ್ ಪ್ರಮಾಣದ ಬೆಂಕಿ ಅವಘಡದಲ್ಲಿ ಕನಿಷ್ಠ 10 ಮಂದಿ ರೋಗಿಗಳು ಸಜೀವ ದಹನವಾಗಿದ್ದು ಹತ್ತಾರು ಮಂದಿಗೆ ಗಾಯವಾಗಿದೆ. 

ಅಅಹ್ಮದ್ ನಗರ್(ಮಹಾರಾಷ್ಟ್ರ): ಮಹಾರಾಷ್ಟ್ರದ ಅಹ್ಮದ್ ನಗರದ ಸಿವಿಲ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಸಂಭವಿಸಿದ ಬೃಹತ್ ಪ್ರಮಾಣದ ಬೆಂಕಿ ಅವಘಡದಲ್ಲಿ ಕನಿಷ್ಠ 10 ಮಂದಿ ರೋಗಿಗಳು ಸಜೀವ ದಹನವಾಗಿದ್ದು ಹತ್ತಾರು ಮಂದಿಗೆ ಗಾಯವಾಗಿದೆ. 

ಬೆಂಕಿ ಅನಾಹುತದಲ್ಲಿ ಇನ್ನಷ್ಟು ರೋಗಿಗಳು ಸಿಲುಕಿಕೊಂಡಿದ್ದು ಸಾವು-ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ. ಅಕ್ಕಪಕ್ಕದ ವಾರ್ಡ್ ಗಳಿಗೆ ಬೆಂಕಿ ಹತ್ತಿಕೊಳ್ಳದಂತೆ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸ್ಥಳಕ್ಕೆ ಅಹ್ಮದ್ ನಗರ ಪೊಲೀಸರು ಕೂಡ ದೌಡಾಯಿಸಿದ್ದಾರೆ. 

ಆಸ್ಪತ್ರೆಯ ಆಡಳಿತಾಧಿಕಾರಿಗಳು, ಸಿಬ್ಬಂದಿ ಸ್ಥಳೀಯರು ಮತ್ತು ರಕ್ಷಣಾ ತಂಡದ ಸಹಾಯದಿಂದ ಹಲವು ರೋಗಿಗಳನ್ನು ಹತ್ತಿರದ ವಾರ್ಡ್ ಗಳಿಗೆ ವರ್ಗಾಯಿಸಿದ್ದಾರೆ.

ಬೆಂಕಿ ಅವಘಡ ನಡೆಯುವ ಸಂದರ್ಭದಲ್ಲಿ ಐಸಿಯುನಲ್ಲಿ ಕನಿಷ್ಠ 20 ಮಂದಿ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು. ಬೆಂಕಿ ಅವಘಡ ಸುದ್ದಿ ಹೊರಬರುತ್ತಿದ್ದಂತೆ ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳ ಸಂಬಂಧಿಕರು ಭಯ, ಆತಂಕದಿಂದ ಆಸ್ಪತ್ರೆಗೆ ದೌಡಾಯಿಸಿದ್ದಾರೆ.
ಬೆಳಗ್ಗೆ 11 ಗಂಟೆಯ ಹೊತ್ತಿಗೆ ಬೆಂಕಿಯನ್ನು ನಂದಿಸಲಾಯಿತಾದರೂ ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಕಾರ ಐಸಿಯು ಬೆಂಕಿಗೆ ಹೆಚ್ಚಿನ ಪ್ರಮಾಣದಲ್ಲಿ ಆಹುತಿಯಾಗಿದ್ದು ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. 

ಸ್ಥಳಕ್ಕೆ ಹಿರಿಯ ಪೊಲೀಸರು, ಅಗ್ನಿಶಾಮಕ ಅಧಿಕಾರಿಗಳು ಆಗಮಿಸಿದ್ದು ರಕ್ಷಣಾ ಮತ್ತು ಪರಿಹಾರ ಕಾರ್ಯಗಳ ನಿಗಾ ವಹಿಸುತ್ತಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದ್ದು ತನಿಖೆ ನಡೆಸಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?