ದೇಶ

ಕೋವಿಡ್-19: ದೇಶದಲ್ಲಿ ಸೋಂಕಿನ ಅಬ್ಬರ ಮತ್ತಷ್ಟು ಇಳಿಕೆ, 10,929 ಹೊಸ ಕೇಸು, 392 ಸಾವು

Sumana Upadhyaya

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿದ್ದು, ಶನಿವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 10,929 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 392 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆಯ ಅಂಕಿಅಂಶಗಳು ತಿಳಿಸಿವೆ. 

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷದ 46 ಸಾವಿರದ 950ರಲ್ಲಿದ್ದು, ಈ ನಡುವೆ ಕಳೆದ 24 ಗಂಟೆಗಳಲ್ಲಿ 12,509 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ  3,37,37,468ಕ್ಕೆ ತಲುಪಿದೆ. ಕಳೆದ ಮಾರ್ಚ್ ನಿಂದ ಗುಣಮುಖ ಹೊಂದಿದವರ ಸಂಖ್ಯೆ ನಿನ್ನೆ ಅಧಿಕವಾಗಿದ್ದು ಶೇಕಡಾ 98.23ರಷ್ಟಿದೆ. 

ದೇಶದಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 1 ಲಕ್ಷದ 46 ಸಾವಿರದ 950 ಆಗಿದ್ದು ಕಳೆದ 255 ದಿನಗಳಲ್ಲಿಯೇ ಅತ್ಯಂತ ಕಡಿಮೆಯಾಗಿದೆ. ಪ್ರತಿದಿನದ ಪಾಸಿಟಿವ್ ದರ ಶೇಕಡಾ 2ಕ್ಕಿಂತ ಕಡಿಮೆಯಿದ್ದು ಕಳೆದ 33 ದಿನಗಳಲ್ಲಿಯೇ ಕಡಿಮೆಯಾಗಿದೆ. 

ಇನ್ನು ಭಾರತದಲ್ಲಿ ಒಂದೇ 6,70,847 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 61,30,17,614 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ದೇಶದಲ್ಲಿ ಇದುವರೆಗೆ 61.39 ಕೋಟಿ ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದೆ. ನಿನ್ನೆ ಒಂದೇ ದಿನ 8 ಲಕ್ಷದ 10 ಸಾವಿರದ 783 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಘ ತಿಳಿಸಿದೆ.

SCROLL FOR NEXT