ದೇಶ

ನ.08 ಕ್ಕೆ ಲಖಿಂಪುರ ಹಿಂಸಾಚಾರ ಪ್ರಕರಣದ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್

Srinivas Rao BV

ನವದೆಹಲಿ: ಲಖಿಂಪುರ ಖೇರಿ ಹಿಂಸಾಚಾರದ ಪ್ರಕರಣವನ್ನು ಸುಪ್ರೀಂ ಕೋರ್ಟ್ ನ.08 ರಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ರೈತರ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರ ಘಟನೆಯಲ್ಲಿ ನಾಲ್ವರು ರೈತರು ಸೇರಿ 8 ಮಂದಿ ನಿಧನರಾಗಿದ್ದರು.

ನ್ಯಾ. ಎನ್ ವಿ ರಮಣ ಹಾಗೂ ನ್ಯಾ. ಸೂರ್ಯಕಾಂತ್ ಹಾಗೂ ಹಿಮಾ ಕೊಹ್ಲಿ ನೇತೃತ್ವದ ಸುಪ್ರೀಂ ಕೋರ್ಟ್ ಪೀಠ ಅ.26 ರಂದು ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿ, 2018 ರ ಸಾಕ್ಷಿ ರಕ್ಷಣಾ ಯೋಜನೆಯಡಿ ಸಾಕ್ಷ್ಯಗಳಿಗೆ ರಕ್ಷಣೆ ಒದಗಿಸುವಂತೆ ಸೂಚಿಸಿತ್ತು.

ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಎದುರು ಸಿಆರ್ ಪಿಸಿಯ ಸೆಕ್ಷನ್ 164 ಅಡಿಯಲ್ಲಿ ಹೇಳಿಕೆಗಳನ್ನು ದಾಖಲಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು ಹಾಗೂ ತಜ್ಞರ ಮೂಲಕ ಡಿಜಿಟಲ್ ಸಾಕ್ಷ್ಯ ಪರಿಶೀಲನೆಯನ್ನು ತ್ವರಿತಗೊಳಿಸಬೇಕೆಂದು ಹೇಳಿತ್ತು.

ಇನ್ನು ಪತ್ರಕರ್ತನೋರ್ವರಿಗೆ, ಶ್ಯಾಮ್ ಸುಂದರ್ ಎಂಬಾತನ ಮೇಲೆ ಗುಂಪು ಹಲ್ಲೆ ನಡೆದಿದ್ದರ ಬಗ್ಗೆಯೂ ರಾಜ್ಯ ಸರ್ಕಾರದಿಂದ ಕೋರ್ಟ್ ಸ್ಥಿತಿಗತಿ ವರದಿಯನ್ನು ಕೇಳಿತ್ತು.

SCROLL FOR NEXT