ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಜಮ್ಮು-ಕಾಶ್ಮೀರ: ಶ್ರೀನಗರದ ಬೊರಿಕದಲ್ ನಲ್ಲಿ ಉಗ್ರರಿಂದ ಓರ್ವನ ಹತ್ಯೆ

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಯ ಪ್ರಕರಣವೊಂದು ಮತ್ತೆ ವರದಿಯಾಗಿದೆ. ನ.09 ರಂದು ಶ್ರೀನಗರದ ಬೋರಿಕದಲ್ ನಲ್ಲಿ ವ್ಯಕ್ತಿಯೋರ್ವನನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಹತ್ಯೆ (ಸಾಂಕೇತಿಕ ಚಿತ್ರ)
Srinivas Rao BV
Updated On : 9 Nov 2021, 1:41 pm

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಯ ಪ್ರಕರಣವೊಂದು ಮತ್ತೆ ವರದಿಯಾಗಿದೆ. ನ.09 ರಂದು ಶ್ರೀನಗರದ ಬೋರಿಕದಲ್ ನಲ್ಲಿ ವ್ಯಕ್ತಿಯೋರ್ವನನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. 

ಮೃತ ವ್ಯಕ್ತಿಯನ್ನು ಮೊಹಮ್ಮದ್ ಇಬ್ರಾಹಿಮ್ ಖಾನ್ ಎಂದು ಗುರುತಿಸಲಾಗಿದ್ದು,  ತೀವ್ರವಾಗಿ ಗಾಯಗೊಂಡ ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ವೇಳೆ ಆತ ಕೊನೆಯುಸಿರೆಳೆದಿದ್ದಾರೆ.

ಪೊಲೀಸ್ ಇಲಾಖೆ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದು, ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ವೇಳೆ ಆತ ಮೃತಪಟ್ಟಿದ್ದಾನೆ ಎಂದು ಹೇಳಿದೆ.

Advertisement

Advertisement

ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಶೋಧಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಇದಕ್ಕೂ ಮುನ್ನ ಭಾನುವಾರದಂದು ರಾತ್ರಿ ಉಗ್ರರು ಓರ್ವ ಪೊಲೀಸ್ ಪೇದೆಯನ್ನು ಹತ್ಯೆ ಮಾಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments