ಸಂಗ್ರಹ ಚಿತ್ರ 
ದೇಶ

ಕೋವಿಡ್-19: ಭಾರತದಲ್ಲಿಂದು 10,126 ಹೊಸ ಕೇಸ್ ಪತ್ತೆ, 332 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 10,126 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 332 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 10,126 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 332 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಮಂಗಳವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,43,77,113ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,61,389ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,40,638ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 1,982 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ  3,37,75,086ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 8,70,058 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 61,60,71,949 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,09,08,16,356 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!