ಸಿಎಂ ಬಸವರಾಜ ಬೊಮ್ಮಾಯಿ 
ದೇಶ

ಪ್ರಿಯಾಂಕ್ ಖರ್ಗೆ ಮಾತಿಗೆಲ್ಲ ಪ್ರತಿಕ್ರಿಯಿಸಲ್ಲ, ಬಿಟ್ ಕಾಯಿನ್ ದಂಧೆಯಲ್ಲಿ ಕಾಂಗ್ರೆಸ್ ನಾಯಕರ ಹೆಸರಿದೆ: ಸಿಎಂ ಬೊಮ್ಮಾಯಿ

ಬಿಟ್ ಕಾಯಿನ್ ದಂಧೆಯಲ್ಲಿ ಕಾಂಗ್ರೆಸ್ ನಾಯಕರ ಹೆಸರಿದೆ, ಮೊದಲು ಕಾಂಗ್ರೆಸ್ ನಾಯಕರು ಆ ಬಗ್ಗೆ ಚಿಂತನೆ ಮಾಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

ನವದೆಹಲಿ: ಬಿಟ್ ಕಾಯಿನ್ ದಂಧೆಯಲ್ಲಿ ಕಾಂಗ್ರೆಸ್ ನಾಯಕರ ಹೆಸರಿದೆ, ಮೊದಲು ಕಾಂಗ್ರೆಸ್ ನಾಯಕರು ಆ ಬಗ್ಗೆ ಚಿಂತನೆ ಮಾಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

ದೆಹಲಿಗೆ ಬಂದಿಳಿದ ಅವರನ್ನು ಮಾಧ್ಯಮದವರು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಆರೋಪದ ಬಗ್ಗೆ ಪ್ರಶ್ನಿಸಿದಾಗ, ಪ್ರಿಯಾಂಕ್ ಖರ್ಗೆ ಹೇಳಿಕೆಗಳಿಗೆಲ್ಲಾ ನಾನು ಪ್ರತಿಕ್ರಿಯಿಸಲ್ಲ, ಪಾಪ ಪ್ರಿಯಾಂಕ್ ಸರಿಯಾದ ಸಂಪೂರ್ಣ ಮಾಹಿತಿ ತರಿಸಿಕೊಳ್ಳಲಿ ದಂಧೆಯಲ್ಲಿ ಕಾಂಗ್ರೆಸ್ ನಾಯಕರ ಹೆಸರುಗಳಿವೆ, ಆ ಬಗ್ಗೆ ಅವರು ಮೊದಲು ಚಿಂತನೆ ಮಾಡಿಕೊಳ್ಳಲಿ ಎಂದರು.

ಬಿಟ್ ಕಾಯಿನ್ ದಂಧೆಯ ಬಗ್ಗೆ ಕೇಳಿಬಂದಾಗಲೇ ಪ್ರತಿಕ್ರಿಯಿಸಿದ್ದ ಸಿಎಂ ಬೊಮ್ಮಾಯಿ ಬಿಜೆಪಿ ಸರ್ಕಾರ ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸಲು ನೋಡುವುದಿಲ್ಲ, ನಿಷ್ಪಕ್ಷಪಾತ ತನಿಖೆ ನಡೆಸುತ್ತದೆ, ಬಿಟ್ ಕಾಯಿನ್ ದಂಧೆ, ಡ್ರಗ್ಸ್ ದಂಧೆಯ ವಿರುದ್ಧ ಸಮರ ಸಾರಿದ್ದೇ ಬಿಜೆಪಿ ಸರ್ಕಾರ, ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಿಟ್ ಕಾಯಿನ್ ದಂಧೆಯ ಆರೋಪಿಗಳನ್ನು ರಕ್ಷಿಸಿತ್ತು ಎಂದು ಆರೋಪಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video