ನಟಿ ಶ್ರಬಂತಿ ಚಟರ್ಜಿ 
ದೇಶ

ಪಶ್ಚಿಮ ಬಂಗಾಳ: ಬಿಜೆಪಿಗೆ ನಟಿ ಶ್ರಬಂತಿ ಚಟರ್ಜಿ ಗುಡ್ ಬೈ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಸೇರಿ, ಟಿಎಂಸಿ ಅಭ್ಯರ್ಥಿ ಪಾರ್ಥ ಚಟರ್ಜಿ ವಿರುದ್ಧ ಸೋತಿದ್ದ ಬಂಗಾಳದ ನಟಿ ಶ್ರಬಂತಿ ಚಟರ್ಜಿ ಗುರುವಾರ ಪಕ್ಷವನ್ನು ತೊರೆದಿದ್ದಾರೆ. 

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಸೇರಿ, ಟಿಎಂಸಿ ಅಭ್ಯರ್ಥಿ ಪಾರ್ಥ ಚಟರ್ಜಿ ವಿರುದ್ಧ ಸೋತಿದ್ದ  ಬಂಗಾಳದ ನಟಿ ಶ್ರಬಂತಿ ಚಟರ್ಜಿ ಗುರುವಾರ ಪಕ್ಷವನ್ನು ತೊರೆದಿದ್ದಾರೆ. ಪಶ್ಚಿಮ ಬಂಗಾಳವನ್ನು ಪ್ರಗತಿಯತ್ತ ಕೊಂಡೊಯ್ಯುವಲ್ಲಿ ಪಕ್ಷದಲ್ಲಿ ಪ್ರಾಮಾಣಿಕತೆ ಮತ್ತು ಉಪಕ್ರಮದ ಕೊರತೆಯ ಕಾರಣದಿಂದ ಪಕ್ಷ ತೊರೆಯುತ್ತಿರುವುದಾಗಿ ಅವರು ಹೇಳಿದ್ದಾರೆ.

ಭಾರೀ ಪ್ರಚಾರದ ಹೊರತಾಗಿಯೂ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರವನ್ನು ಅಧಿಕಾರದಿಂದ ದೂರವಿಡುವಲ್ಲಿ ವಿಫಲವಾದ ನಂತರ 34 ವರ್ಷದ ನಟಿ ಶ್ರಬಂತಿ ಬಿಜೆಪಿ ಪಕ್ಷದಿಂದ ಅಂತರವನ್ನು ಕಾಯ್ದುಕೊಂಡಿದ್ದರು.

ಕಳೆದ  ಚುನಾವಣೆಯಲ್ಲಿ ನಾನು ಸ್ಪರ್ಧಿಸಿದ್ದ ಬಿಜೆಪಿಯೊಂದಿಗಿನ ಎಲ್ಲಾ ಸಂಬಂಧಗಳನ್ನು ಕಡಿದುಕೊಂಡಿದ್ದೇನೆ. ಬಂಗಾಳವನ್ನು ಪ್ರಗತಿಯತ್ತ ಕೊಂಡೊಯ್ಯುವಲ್ಲಿ ಅವರಲ್ಲಿನ ಪ್ರಾಮಾಣಿಕತೆ ಮತ್ತು ಉಪ ಕ್ರಮದ ಕೊರತೆಯೇ  ತಮ್ಮ ರಾಜೀನಾಮೆಗೆ ಕಾರಣ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಆದಾಗ್ಯೂ, ಪಶ್ಚಿಮ ಬಂಗಾಳ ಬಿಜೆಪಿ, ಚಟರ್ಜಿ ಅವರ ನಿರ್ಧಾರಕ್ಕೆ ಹೆಚ್ಚಿನ ಮಹತ್ವ ನೀಡಿಲ್ಲ. ಚುನಾವಣೆ ನಂತರ ಅವರು ಪಕ್ಷದಲ್ಲಿ ಇದ್ದಾರೆ ಎಂಬುದೇ ನನಗೆ ಗೊತ್ತಿರಲಿಲ್ಲ. ಇದರಿಂದ ಪಕ್ಷದ ಮೇಲೆ ಯಾವುದೇ ಪರಿಣಾಮ ಆಗಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸುಕಾಂತ ಮಜುಂದ್ದಾರ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್