ದೇಶ

ಗೋವಾ ಚುನಾವಣೆಯಲ್ಲಿ ಎಎಪಿ ಗೆದ್ದರೆ ಭಂಡಾರಿ ಸಮುದಾಯದ ವ್ಯಕ್ತಿ ಸಿಎಂ, ಕ್ರಿಶ್ಚಿಯನ್ ಡಿಸಿಎಂ: ಮನೀಶ್ ಸಿಸೋಡಿಯಾ

Lingaraj Badiger

ಪಣಜಿ: ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಭಂಡಾರಿ ಸಮುದಾಯದ ವ್ಯಕ್ತಿಯನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸುವುದಾಗಿ ಆಮ್ ಆದ್ಮಿ ಪಕ್ಷದ(ಎಎಪಿ) ಹಿರಿಯ ನಾಯಕ, ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಅವರು ಗುರುವಾರ ಹೇಳಿದ್ದಾರೆ.

ಇಂದು ಪಣಜಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಸೋಡಿಯಾ ಅವರು, ಗೋವಾದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಕ್ರೈಸ್ತ ಸಮುದಾಯದ ವ್ಯಕ್ತಿ ಉಪಮುಖ್ಯಮಂತ್ರಿ ಆಗಲಿದ್ದಾರೆ ಎಂದು ತಿಳಿಸಿದರು.

ಗೋವಾದಲ್ಲಿ ಎಎಪಿಗೆ ಹೆಚ್ಚು ಮನ್ನಣೆ ಸಿಗುತ್ತಿದೆ, ಎಲ್ಲಾ ಸಮುದಾಯಗಳ ಜನರು ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷದ ಜೊತೆ ಕೈಜೋಡಿಸುತ್ತಿದ್ದಾರೆ ಎಂದು ದೆಹಲಿಯ ಉಪ ಮುಖ್ಯಮಂತ್ರಿ ಹೇಳಿದ್ದಾರೆ.

ರಾಜ್ಯದಲ್ಲಿ ಸಾಕಷ್ಟು ಜನಸಂಖ್ಯೆಯನ್ನು ಹೊಂದಿರುವ ಭಂಡಾರಿ ಸಮುದಾಯವನ್ನು ಸರ್ಕಾರದಲ್ಲಿ ಪ್ರಾತಿನಿಧ್ಯಕ್ಕೆ ಸಂಬಂಧಿಸಿದಂತೆ ಯಾವಾಗಲೂ ಕಡೆಗಣಿಸಲಾಗಿದೆ ಎಂದರು.

ಗೋವಾ ವಿಮೋಚನೆಯ ನಂತರ ರಾಜ್ಯದ ಇತಿಹಾಸದಲ್ಲಿ ಒಮ್ಮೆ ಮಾತ್ರ ಭಂಡಾರಿ ಸಮುದಾಯದ ನಾಯಕರೊಬ್ಬರು ಮುಖ್ಯಮಂತ್ರಿಯಾಗಿದ್ದಾರೆ ಮತ್ತು ಅದು ಕೂಡ ಎರಡೂವರೆ ವರ್ಷಗಳ ಅಲ್ಪಾವಧಿಗೆ ಯಾರನ್ನೂ ಹೆಸರಿಸದೆ ಸಿಸೋಡಿಯಾ ಹೇಳಿದರು.

SCROLL FOR NEXT