ಸಾಂದರ್ಭಿಕ ಚಿತ್ರ 
ದೇಶ

ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ: ಜನರು ಮನೆಯಿಂದ ಹೊರ ಹೋಗದಂತೆ ಸಿಪಿಸಿಬಿ ಸಲಹೆ

ರಾಷ್ಟ್ರ ರಾಜಧಾನಿಯಲ್ಲಿ ವಾಯುಮಾಲಿನ್ಯ ಮಿತಿಮೀರಿದ ಕಾರಣ ಜನರು ಮನೆಯಿಂದ ಹೊರ ಹೋಗುವುದನ್ನು ತಪ್ಪಿಸುವಂತೆ ಕೇಂದ್ರ ಮಾಲಿನ್ಯ ನಿಗಾ ಸಂಸ್ಥೆ ಶುಕ್ರವಾರ ಸಲಹೆ ನೀಡಿದೆ ಮತ್ತು ವಾಹನ ಬಳಕೆಯನ್ನು ಕನಿಷ್ಠ...

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ವಾಯುಮಾಲಿನ್ಯ ಮಿತಿಮೀರಿದ ಕಾರಣ ಜನರು ಮನೆಯಿಂದ ಹೊರ ಹೋಗುವುದನ್ನು ತಪ್ಪಿಸುವಂತೆ ಕೇಂದ್ರ ಮಾಲಿನ್ಯ ನಿಗಾ ಸಂಸ್ಥೆ ಶುಕ್ರವಾರ ಸಲಹೆ ನೀಡಿದೆ ಮತ್ತು ವಾಹನ ಬಳಕೆಯನ್ನು ಕನಿಷ್ಠ ಶೇಕಡಾ 30 ರಷ್ಟು ಕಡಿಮೆಗೊಳಿಸುವಂತೆ ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಿಗೆ ನಿರ್ದೇಶನ ನೀಡಿದೆ.

ಹಿಂದಿನ ದಿನ ನಡೆದ ಪರಿಶೀಲನಾ ಸಭೆಯಲ್ಲಿ, ನವೆಂಬರ್ 18 ರವರೆಗೆ ಕಡಿಮೆ ಗಾಳಿ ಮತ್ತು ಶಾಂತ ವಾತಾವರಣದ ದೃಷ್ಟಿಯಿಂದ ಮಾಲಿನ್ಯಕಾರಕಗಳ ಪ್ರಸರಣಕ್ಕೆ ಹವಾಮಾನ ಪರಿಸ್ಥಿತಿ ಹೆಚ್ಚು ಪ್ರತಿಕೂಲವಾಗಿರುತ್ತದೆ ಎಂಬುದನ್ನು ಗಮನಿಸಲಾಗಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ(CPCB) ಆದೇಶವೊಂದರಲ್ಲಿ ಹೇಳಿದೆ.

ದೆಹಲಿಯಲ್ಲಿ ಕಳೆದ 24-ಗಂಟೆಗಳ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ(AQI) 471 ದಾಖಲಾಗಿದೆ. ಇದು ಈ ಋತುವಿನಲ್ಲಿ ಅತ್ಯಂತ ಕೆಟ್ಟ ವಾಯು ಆಗಿದೆ. ಗುರುವಾರ 411 ರಷ್ಟು ದಾಖಲಾಗಿತ್ತು. ಫರಿದಾಬಾದ್ (460), ಗಾಜಿಯಾಬಾದ್ (486), ಗ್ರೇಟರ್ ನೋಯ್ಡಾ (478), ಗುರುಗ್ರಾಮ್ (448) ಮತ್ತು ನೋಯ್ಡಾ(488)ದಲ್ಲಿ ಸಂಜೆ 4 ಗಂಟೆಗೆ ತೀವ್ರ ವಾಯು ಗುಣಮಟ್ಟವನ್ನು ದಾಖಲಿಸಿದೆ.

ಸರ್ಕಾರಿ ಮತ್ತು ಖಾಸಗಿ ಕಚೇರಿಗಳು ಮತ್ತು ಇತರ ಸಂಸ್ಥೆಗಳು ವಾಹನದ ಬಳಕೆಯನ್ನು ಕನಿಷ್ಠ ಶೇಕಡಾ 30 ರಷ್ಟು ಕಡಿಮೆ ಮಾಡಲು ಸಲಹೆ ನೀಡಲಾಗಿದೆ.  ಜನರು ಮನೆಯಿಂದ ಕೆಲಸ ಮಾಡುವ ಮೂಲಕ, ಕಾರ್-ಪೂಲಿಂಗ್ ಇತ್ಯಾದಿಗಳ ಮೂಲಕ ಹೊರಾಂಗಣ ಚಟುವಟಿಕೆಗಳನ್ನು ಮಿತಿಗೊಳಿಸಬೇಕು ಸಿಪಿಸಿಬಿ ಸಲಹೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT