ಅಂತರರಾಷ್ಟ್ರೀಯ ಗಡಿಯಲ್ಲಿ ಜಾನುವಾರು ಕಳ್ಳಸಾಗಣೆ: ಬಿಎಸ್ ಎಫ್ ಸಿಬ್ಬಂದಿಯಿಂದ ಇಬ್ಬರು ಬಾಂಗ್ಲಾ ದೇಶಿಯರ ಹತ್ಯೆ
ಪಶ್ಚಿಮ ಬಂಗಾಳದ ಕೂಚ್ಬೆಹಾರ್ ಬಳಿ ಅಂತರರಾಷ್ಟ್ರೀಯ ಗಡಿಯಲ್ಲಿ ಜಾನುವಾರು ಕಳ್ಳಸಾಗಣೆ ತಡೆಗೆ ಬಿಎಸ್ಎಫ್ ಸಿಬ್ಬಂದಿ ಶುಕ್ರವಾರ ಗುಂಡಿನ ದಾಳಿ ನಡೆಸಿದ್ದು, ಬಾಂಗ್ಲಾದೇಶದ ಇಬ್ಬರು ಪ್ರಜೆಗಳು ಮೃತಪಟ್ಟಿದ್ದಾರೆ.
ನವದೆಹಲಿ: ಪಶ್ಚಿಮ ಬಂಗಾಳದ ಕೂಚ್ಬೆಹಾರ್ ಬಳಿ ಅಂತರರಾಷ್ಟ್ರೀಯ ಗಡಿಯಲ್ಲಿ ಜಾನುವಾರು ಕಳ್ಳಸಾಗಣೆ ತಡೆಗೆ ಬಿಎಸ್ಎಫ್ ಸಿಬ್ಬಂದಿ ಶುಕ್ರವಾರ ಗುಂಡಿನ ದಾಳಿ ನಡೆಸಿದ್ದು, ಬಾಂಗ್ಲಾದೇಶದ ಇಬ್ಬರು ಪ್ರಜೆಗಳು ಮೃತಪಟ್ಟಿದ್ದಾರೆ.
ಗುಂಡಿನ ದಾಳಿ ವೇಳೆ ಭದ್ರತಾ ಪಡೆ ಯೋಧರೊಬ್ಬರಿಗೆ ಗಾಯವಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಗಡಿ ಭದ್ರತಾ ಪಡೆ (ಬಿಎಸ್ಎಫ್)ನ ವಕ್ತಾರರು ತಿಳಿಸಿದ್ದಾರೆ.
ಇದನ್ನೂ ಓದಿ: ಕುಲ್ಗಾಂನಲ್ಲಿ ಎನ್ಕೌಂಟರ್: ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನಾಪಡೆ
ಭಾರತದ ಗಡಿದಾಟಿ ಜಾನುವಾರುಗಳ ಕಳ್ಳಸಾಗಣೆಗೆ ಕಿಡಿಗೇಡಿಗಳು ನಸುಕಿನ 3 ಗಂಟೆಗೆ ಯತ್ನಿಸಿದ್ದರು. ವಾಪಸು ಮರಳುವಂತೆ ಸೂಚಿಸಿದರು. ಅದಕ್ಕೆ ಸ್ಪಂದಿಸಲಿಲ್ಲ. ಬದಲಿಗೆ ಕಬ್ಬಿಣದ ಸರಳು ಬಳಸಿ ಹಲ್ಲೆಗೆ ಮುಂದಾಗಿದ್ದರು. ಆತ ಆತ್ಮರಕ್ಷಣೆ ಕ್ರಮವಾಗಿ ಭದ್ರತಾ ಪಡೆ ಸಿಬ್ಬಂದಿಯು ಗುಂಡಿನ ದಾಳಿ ನಡೆಸಿದರು’ ಬಿಎಸ್ ಎಫ್ ಸಿಬ್ಬಂದಿ ಅಂತರರಾಷ್ಟ್ರೀಯ ಗಡಿಗೆ ಅನುಗುಣವಾಗಿ ಹಾಕಿದ್ದ ಬೇಲಿಯ ಬಳಿ ಪರಿಶೀಲನೆ ನಡೆಸಿದಾಗ ಇಬ್ಬರು ಅಪರಿಚಿತ ಕಿಡಿಗೇಡಿಗಳ ಶವ ಪತ್ತೆಯಾಯಿತು ಎಂದು ವಕ್ತಾರರು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.