ಸಂಗ್ರಹ ಚಿತ್ರ 
ದೇಶ

ರಾಜ್ಯಗಳ ಬಳಿ ಬಳಕೆಯಾಗದ 18.53 ಕೋಟಿ ಕೋವಿಡ್-19 ಲಸಿಕೆ ಲಭ್ಯವಿದೆ: ಕೇಂದ್ರ

ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಇನ್ನೂ ಬಳಕೆಯಾಗದ 18.53 ಕೋಟಿ ಡೋಸ್ ಗೂ ಹೆಚ್ಚು ಕೋವಿಡ್ -19 ಲಸಿಕೆ ಲಭ್ಯವಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ನವದೆಹಲಿ: ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಇನ್ನೂ ಬಳಕೆಯಾಗದ 18.53 ಕೋಟಿ ಡೋಸ್ ಗೂ ಹೆಚ್ಚು ಕೋವಿಡ್ -19 ಲಸಿಕೆ ಲಭ್ಯವಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಎಲ್ಲಾ ಮೂಲಗಳ ಮೂಲಕ ಈವರೆಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 1,23,19,12,030 ಡೋಸ್ ಲಸಿಕೆಯನ್ನು ನೀಡಲಾಗಿದೆ ಎಂದು ಹೇಳಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,11,40,48,134 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!