ಸೋನು ಸೂದ್ 
ದೇಶ

ನಟ ಸೋನು ಸೂದ್ ಸಹೋದರಿ ಮಾಳವಿಕಾ ರಾಜಕೀಯ ಪ್ರವೇಶ, ಎಎಪಿ, ಕಾಂಗ್ರೆಸ್‌ ಕಡೆಗೆ ಒಲವು

ಬಾಲಿವುಡ್ ನಟ ಮತ್ತು ಪರೋಪಕಾರಿ ಸೋನು ಸೂದ್ ಅವರು ತಮ್ಮ ಸಹೋದರಿ ಮಾಳವಿಕಾ ರಾಜಕೀಯಕ್ಕೆ ಸೇರುತ್ತಿದ್ದಾರೆ, ಆದರೆ ತಾವು ರಾಜಕೀಯ ಸೇರುವ ಯಾವುದೇ ಯೋಚನೆ ಇಲ್ಲ ಎಂದು ಭಾನುವಾರ ಹೇಳಿದ್ದಾರೆ.

ಚಂಡೀಗಢ: ಬಾಲಿವುಡ್ ನಟ ಮತ್ತು ಪರೋಪಕಾರಿ ಸೋನು ಸೂದ್ ಅವರು ತಮ್ಮ ಸಹೋದರಿ ಮಾಳವಿಕಾ ರಾಜಕೀಯಕ್ಕೆ ಸೇರುತ್ತಿದ್ದಾರೆ, ಆದರೆ ತಾವು ರಾಜಕೀಯ ಸೇರುವ ಯಾವುದೇ ಯೋಚನೆ ಇಲ್ಲ ಎಂದು ಭಾನುವಾರ ಹೇಳಿದ್ದಾರೆ.

ಸೋನು ಸೂದ್ ಅವರು ತಮ್ಮ ಸಹೋದರಿ ರಾಜಕೀಯ ಪ್ರವೇಶಿಸುತ್ತಾರೆ ಎಂದು ಘೋಷಿಸಿದ್ದು, ಮಾಳವಿಕಾ ಅವರು 2022ರ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಮೋಗಾದಿಂದ ಸ್ಪರ್ಧಿಸಬಹುದು ಎಂಬ ಊಹಾಪೋಹಗಳಿಗೆ ಉತ್ತೇಜನ ನೀಡಿದೆ. ಮೋಗಾ ಜಿಲ್ಲೆಯವರಾದ ಸೂದ್, ಅವರ ಸಹೋದರಿ ಈ ಹಿಂದೆ ಸಾಕಷ್ಟು ಅದ್ಭುತ ಕೆಲಸ ಮಾಡಿದ್ದಾರೆ.

"ಮಾಳವಿಕಾ ಅವರು ಖಂಡಿತವಾಗಿಯೂ ಪಂಜಾಬ್‌ ಜನತೆಯ ಸೇವೆ ಸಲ್ಲಿಸಲು ರಾಜಕೀಯಕ್ಕೆ ಬರುತ್ತಾರೆ ಎಂದು ನಾವು ಇಂದು ಅಧಿಕೃತವಾಗಿ ಹೇಳಲು ಬಯಸುತ್ತೇವೆ" ಎಂದು ಸೋನು ಸೂದ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದೇ ವೇಳೆ, ಮಾಳವಿಕಾ ಅವರು ಯಾವ ರಾಜಕೀಯ ಪಕ್ಷ ಸೇರುತ್ತಾರೆ ಎಂಬ ವರದಿಗಾರರ ಪ್ರಶ್ನೆಗೆ, ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಸೋನು ಸೂದ್ ಹೇಳಿದ್ದಾರೆ.

ಯಾವ ಪಕ್ಷ ಎಂಬುದರ ಬಗ್ಗೆ ನಾವು ಇನ್ನೂ ನಿರ್ಧಾರ ಮಾಡಿಲ್ಲ, ಸಮಯ ಬಂದಾಗ ನಾವು ನಿಮಗೆ ತಿಳಿಸುತ್ತೇವೆ ಎಂದಿದ್ದಾರೆ. ಆದರೆ 'ಎಎಪಿ ಮತ್ತು ಕಾಂಗ್ರೆಸ್‌ ಎರಡೂ ಒಳ್ಳೆಯ ಪಕ್ಷಗಳು' ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ- ಬಿಜೆಪಿ

SCROLL FOR NEXT