ಪ್ರಶಾಂತ್ ಬೋಸ್-ಶೀಲಾ ಮರಾಂಡಿ 
ದೇಶ

ತಲೆಗೆ 1 ಕೋಟಿ ಬಹುಮಾನ ಹೊಂದಿದ್ದ ಮಾವೋವಾದಿ ಉನ್ನತ ನಾಯಕ ಪ್ರಶಾಂತ್ ಬೋಸ್ ಬಂಧನ!

ಭದ್ರತಾ ಪಡೆಗಳಿಗೆ ದೊಡ್ಡ ಯಶಸ್ಸು ಸಿಕ್ಕಿದ್ದು 1 ಕೋಟಿ ಬಹುಮಾನ ಹೊಂದಿದ್ದ ಸಿಪಿಐ(ಮಾವೋವಾದಿ) ಸಂಘಟನೆಯ ಉನ್ನತ ನಾಯಕ ಪ್ರಶಾಂತ್ ಬೋಸ್ ಅಲಿಯಾಸ್ ಕಿಶನ್ ದಾ ನನ್ನು ಜಾರ್ಖಂಡ್‌ನಲ್ಲಿ ಬಂಧಿಸಲಾಗಿದೆ. 

ರಾಂಚಿ: ಭದ್ರತಾ ಪಡೆಗಳಿಗೆ ದೊಡ್ಡ ಯಶಸ್ಸು ಸಿಕ್ಕಿದ್ದು 1 ಕೋಟಿ ಬಹುಮಾನ ಹೊಂದಿದ್ದ ಸಿಪಿಐ(ಮಾವೋವಾದಿ) ಸಂಘಟನೆಯ ಉನ್ನತ ನಾಯಕ ಪ್ರಶಾಂತ್ ಬೋಸ್ ಅಲಿಯಾಸ್ ಕಿಶನ್ ದಾ ನನ್ನು ಜಾರ್ಖಂಡ್‌ನಲ್ಲಿ ಬಂಧಿಸಲಾಗಿದೆ. 

ಗುಪ್ತಚರ ಇಲಾಖೆಯ ಮಾಹಿತಿಯನ್ನು ಆಧರಿಸಿ ಸುಮಾರು 50 ವರ್ಷಗಳಿಂದ ಸಕ್ರಿಯವಾಗಿದ್ದ ಪ್ರಶಾಂತ್ ಬೋಸ್ ಜೊತೆಗೆ ಅವರ ಪತ್ನಿ ಶೀಲಾ ಮರಾಂಡಿಯನ್ನು ಜಾರ್ಖಂಡ್ ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರವೇ ಇಬ್ಬರನ್ನು ಬಂಧಿಸಿದ್ದರೂ ಇಬ್ಬರ ಪತ್ತೆಯನ್ನು ದೃಢೀಕರಿಸಿಕೊಂಡ ನಂತರ ಇದೀಗ ಇಬ್ಬರ ಬಂಧನವನ್ನು ಪೊಲೀಸರು ಖಚಿತಪಡಿಸಿದ್ದಾರೆ.

ಕೋಲ್ಕತ್ತಾದ ಜಾದವ್‌ಪುರ ಮೂಲದ ಮಾವೋವಾದಿ ನಾಯಕ ಕಿಶನ್ ದಾಸ್ ಗೆ 75 ವರ್ಷ ವಯಸ್ಸಾಗಿದೆ ಎಂದು ಹೇಳಲಾಗುತ್ತಿದೆ. ಕಿಶನ್ ದಾ ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಜಾರ್ಖಂಡ್‌ನಲ್ಲಿ ಕಿಶನ್ ದಾ ವಿರುದ್ಧ 70ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. 

ಕಿಶನ್ ದಾ ಅವರು ಮಾವೋವಾದಿಗಳ ಪೂರ್ವ ಪ್ರಾದೇಶಿಕ ಬ್ಯೂರೋದ ಕಾರ್ಯದರ್ಶಿಯಾಗಿದ್ದಾರೆ. ಕಿಶನ್ ದಾ ಬಂಗಾಳ, ಒಡಿಶಾ, ಛತ್ತೀಸ್‌ಗಢ, ಅಸ್ಸಾಂ ಮತ್ತು ಇತರ ರಾಜ್ಯಗಳಲ್ಲಿ ದೀರ್ಘಕಾಲ ಸಕ್ರಿಯರಾಗಿದ್ದರು. ಕಿಶನ್ ದಾ ವಿರುದ್ಧ ಬಂಗಾಳ ಮತ್ತು ಇತರ ರಾಜ್ಯಗಳಲ್ಲಿಯೂ ಪ್ರಕರಣಗಳು ದಾಖಲಾಗಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು, ಭಾರತದಿಂದ ನೆರವು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ