ದೇಶ

ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್ ಕೌಂಟರ್; ಸಿಮೆಂಟ್ ಉದ್ಯಮಿ ಸೇರಿ 3 ಉಗ್ರರು ಹತ

Manjula VN

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಹೈದರ್‌ಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಎನ್‌ಕೌಂಟರ್‌ ಮಾಡಿದ್ದಾರೆ.

ಸಾವಿಗೀಡಾದ ಉಗ್ರರನ್ನು ಸಮೀರ್ ಮತ್ತು ಅಮೀರ್ ಎಂದು ಗುರುತಿಸಲಾಗಿದೆ. ಭಯೋತ್ಪಾದನೆ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಮೂರನೇ ವ್ಯಕ್ತಿ ಮೊಹಮ್ಮದ್ ಅಲ್ತಾಫ್‌ ಭಟ್'ನನ್ನು ಭದ್ರತಾ ಪಡೆಗಳು ಕೊಂದಿದ್ದಾರೆ.

ಅಲ್ತಾಫ್ ಸಿಮೆಂಟ್ ಉದ್ಯಮಿಯಾಗಿದ್ದು, ಉಗ್ರರಿಗೆ ಆಶ್ರಯ ನೀಡಿದ್ದ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಮೂರೂವರೆ ಗಂಟೆಗಳ ಕಾಲ ಎನ್‌ಕೌಂಟರ್
ಮೂಲಗಳ ಪ್ರಕಾರ, ನಿನ್ನೆ ರಾತ್ರಿ ಹೈದರ್‌ಪೋರಾದ ಮನೆಯೊಂದರಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಮಾಹಿತಿ ದೊರೆಯಿತು. ಈ ಗುಪ್ತ ಮಾಹಿತಿ ಆಧಾರದ ಮೇಲೆ ಭಯೋತ್ಪಾದಕರ ವಿರುದ್ಧ ಪೊಲೀಸರು ಹಾಗೂ ಸೇನೆ ಜಂಟಿಯಾಗಿ ಕಾರ್ಯಾಚರಣೆಗಿಳಿದಿದೆ.

ಈ ವೇಳೆ ಅಲರ್ಟ್ ಆದ ಉಗ್ರರು, ಸೇನೆ ಮೇಲೆ ಗುಂಡು ಹಾರಿಸಲು ಪ್ರಾರಂಭಿಸಿದ್ದಾರೆ. ಭಯೋತ್ಪಾದಕರಿಗೆ ಶರಣಾಗುವಂತೆ ಕೇಳಿಕೊಂಡರೂ ಯಾವುದೇ ಪ್ರಯೋಜನವಾಗಲಿಲ್ಲ. ಈ ವೇಳೆ ಪ್ರತಿದಾಳಿ ನಡೆಸಿದ ಸೇನೆ, ಮೂವರನ್ನು ಹೊಡೆದುರುಳಿಸಿದೆ ಅಂತಾ ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.

SCROLL FOR NEXT