ಬಾಲಿವುಡ್ ನ ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ 
ದೇಶ

ಬಿಹಾರ: ರಸ್ತೆ ಅಪಘಾತದಲ್ಲಿ ಸುಶಾಂತ್ ಸಿಂಗ್ ರಜಪೂತ್ ನ ಐವರು ಸಂಬಂಧಿಕರು ಸಾವು

ಬಿಹಾರದ ಲಖಿಸರೈ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಾಲಿವುಡ್ ನ ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಐವರು ದೂರದ ಸಂಬಂಧಿಕರು ಸೇರಿದಂತೆ ಆರು ಮಂದಿ ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪಾಟ್ನಾ: ಬಿಹಾರದ ಲಖಿಸರೈ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಾಲಿವುಡ್ ನ ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಐವರು ದೂರದ ಸಂಬಂಧಿಕರು ಸೇರಿದಂತೆ ಆರು ಮಂದಿ ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಎಸ್ ಯುವಿ ಕಾರು ಟ್ರಕ್ ವೊಂದಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇತರ ನಾಲ್ವರು ಗಾಯಗೊಂಡಿದ್ದಾರೆ. ಟ್ರಕ್ ಡ್ರೈವರ್ ಹಾಗೂ ಸಹಾಯಕ ಹೇಗೂ ಅಲ್ಲಿಂದ ಪರಾರಿಯಾಗಿದ್ದಾರೆ. 

ಮೃತರು ಹರಿಯಾಣ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಒಪಿ ಸಿಂಗ್ ಅವರ ಸಹೋದರಿಯ ಅಂತ್ಯಕ್ರಿಯೆ ಮುಗಿಸಿಕೊಂಡು ಪಾಟ್ನಾದಿಂದ ಜಮುಯಿಗೆ ಮರಳುತ್ತಿರುವುದಾಗಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಂಗ್ ಸುಶಾಂತ್ ಸಿಂಗ್ ಅವರ ಸಹೋದರಿಯನ್ನು ವಿವಾಹವಾಗಿದ್ದಾರೆ. 

ಗಾಯಾಗಳುಗಳಿಗೆ ಸಿಕಂದರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ತದನಂತರ ಪಾಟ್ನಾದ ವೈದ್ಯಕೀಯ ಕಾಲೇಜ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ