ದೇಶ

ಪ್ರಧಾನಿ ಮೋದಿ ರ್ಯಾಲಿಯಲ್ಲಿ ಜನ ಸೇರಿಸಲು ಯೋಗಿ ಸರ್ಕಾರದಿಂದ ಸಾರ್ವಜನಿಕರ ಹಣ ಬಳಕೆ: ಪ್ರಿಯಾಂಕಾ ಗಾಂಧಿ ಆರೋಪ

Manjula VN

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ರ್ಯಾಲಿಗಳಿಗೆ ಹೆಚ್ಚೆಚ್ಚು ಜನರನ್ನು ಸೇರಿಸಲು ಉತ್ತರ ಪ್ರದೇಶ ಸರ್ಕಾರ ಸಾರ್ವಜನಿಕರ ಹಣವನ್ನು ಖರ್ಚು ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಂಗಳವಾರ ಆರೋಪಿಸಿದ್ದಾರೆ.

ಪ್ರಧಾನಿ ಮೋದಿ ಹಾಗೂ ಅಮಿತ್ ಅವರ ರ್ಯಾಲಿಗೆ ಜನರನ್ನು ಸೇರಿಸಲು ಅಧಿಕಾರಿಗಳು ಸಾರ್ವಜನಿಕರ ಹಣವನ್ನು ಎದುರು ನೋಡುತ್ತಿದ್ದಾರೆಂಬ ಮಾಧ್ಯಮಗಳ ಪ್ರಕಟಿಸುತ್ತಿರುವ ಸುದ್ದಿಗಳ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುವ ಪ್ರಿಯಾಂಕಾ ಗಾಂಧಿಯವರು, ಲಾಕ್ಡೌನ್ ಸಂದರ್ಭದಲ್ಲಿ ಲಕ್ಷಾಂತರ ಕಾರ್ಮಿಕರು ದೆಹಲಿಯಿಂದ ಉತ್ತರಪ್ರದೇಶದಲ್ಲಿರುವ ಗ್ರಾಮಗಳಿಗೆ ಕಾಲ್ನಡಿಗೆ ಮೂಲಕ ಬರುತ್ತಿದ್ದಾಗ ಅವರಿಗೆ ಬಸ್ ವ್ಯವಸ್ಥೆ ಕಲ್ಪಿಸಲು ಸರ್ಕಾರಕ್ಕೆ ಆಗಿಲಿಲ್ಲ. ಆದರೆ, ಇದೀಗ ತಮ್ಮ ರ್ಯಾಲಿಗಳಿಗೆ ಜನರ ಸೇರಿಸಲು ಸಾರ್ವಜನಿಕರ ಕಷ್ಟದ ಹಣವನ್ನು ಬಳಕೆ ಮಾಡುತ್ತಿದ್ದಾರೆಂದು ಟ್ವೀಟ್ ಮಾಡಿದ್ದಾರೆ.

ಉತ್ತರ ಪ್ರದೇಶದ ಪ್ರತಿ ಹಳ್ಳಿಯಲ್ಲೂ ಬಿಜೆಪಿ ಬಗ್ಗೆ ತೀವ್ರ ಅಸಮಾಧಾನವಿದೆ. ಇದೀಗ ಬಿಜೆಪಿಯ ರಾಜಕೀಯ ಪ್ರತಿಯೊಬ್ಬರಿಗೂ ಅರ್ಥವಾಗಿದೆ. ಜನರ ಮನ ಗೆಲ್ಲಲು ಇದೀಗ ಕೋಟಿಗಟ್ಟಲೆ ಹಣ ಖರ್ಚು ಮಾಡುತ್ತಿದ್ದಾರೆಂದು ತಿಳಿಸಿದ್ದಾರೆ.

SCROLL FOR NEXT