ದೇಶ

ಪರಮ್ ಬೀರ್ ಸಿಂಗ್ ತಮ್ಮ ಪ್ರಸ್ತುತ ಸ್ಥಳದ ಬಗ್ಗೆ ಮಾಹಿತಿ ನೀಡುವವರೆಗೆ ಮನವಿ ಪರಿಗಣಿಸಲು ಸಾಧ್ಯವಿಲ್ಲ: ಸುಪ್ರೀಂ

Lingaraj Badiger

ನವದೆಹಲಿ: ತಲೆಮರೆಸಿಕೊಂಡಿರುವ ಮುಂಬೈ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಅವರು ತಮ್ಮ ವಿರುದ್ಧದ ಅಪರಾಧ ಪ್ರಕರಣಗಳಲ್ಲಿ ಬಂಧನದಿಂದ ರಕ್ಷಣೆ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಹಿರಿಯ ಐಪಿಎಸ್ ಅಧಿಕಾರಿ ಪರಮ್ ಬೀರ್ ಸಿಂಗ್ ಅವರು ಭಾರತದಲ್ಲಿ ಇರಲಿ ಅಥವಾ ವಿದೇಶದಲ್ಲಿ ತಲೆಮರೆಸಿಕೊಂಡಿರಲಿ ಅವರ ಪ್ರಸ್ತುತ ತಮ್ಮ ಸ್ಥಳದ ಬಗ್ಗೆ ಮಾಹಿತಿ ನೀಡುವವರೆಗೂ ಅವರ ಮನವಿಯನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. 

ಪರಮ್ ಬೀರ್ ಸಿಂಗ್ ಎಲ್ಲಿದ್ದಾರೆ? ಅವರು ತನಿಖೆಗೆ ಏಕೆ ಹಾಜರಾಗಿಲ್ಲ? ಅವರು ಎಲ್ಲಿದ್ದಾರೆಂದು ನಮಗೆ ತಿಳಿದಿಲ್ಲ. ಅವರು ಹಿರಿಯ ಅಧಿಕಾರಿಯಾಗಿ ತಲೆಮರೆಸಿಕೊಂಡಿರುವುದು ವಿಶ್ವಾಸಾರ್ಹತೆಯ ಬಗ್ಗೆ ಕಳವಳವನ್ನು ಉಂಟುಮಾಡುತ್ತದೆ ಎಂದು ಸುಪ್ರೀಂ ಪೀಠ ಹೇಳಿದೆ.

ಪರಮ್ ಬೀರ್ ಸಿಂಗ್ ಅವರ ವಿರುದ್ಧ ಮಹಾರಾಷ್ಟ್ರದಲ್ಲಿ ಕನಿಷ್ಠ ಐದು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಮತ್ತು ಗೋರೆಗಾಂವ್ ಸುಲಿಗೆ ಪ್ರಕರಣದಲ್ಲಿ ಅವರ ವಿರುದ್ಧ ಮೂರು ಬಾರಿ ಜಾಮೀನು ರಹಿತ ಬಂಧನ ವಾರೆಂಟ್‌ ಹೊರಡಿಸಲಾಗಿದೆ. ಅಲ್ಲದೆ ಘೋಷಿತ ಅಪರಾಧಿ ಎಂದು ಸಹ ಮುಂಬೈ ಕೋರ್ಟ್ ಘೋಷಿಸಿದೆ.

ಪರಮ್ ಬೀರ್ ಸಿಂಗ್ ಅವರ ವಿರುದ್ಧ ದಾಖಲಾಗಿರುವ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ 30 ದಿನಗಳಲ್ಲಿ ವಿಚಾರಣೆಗೆ ಹಾಜರಾಗಲು ನಿರಾಕರಿಸಿದರೆ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಮುಂಬೈ ಕೋರ್ಟ್ ಆದೇಶಿಸಿದೆ.

SCROLL FOR NEXT