ಸುಪ್ರೀಂ ಕೋರ್ಟ್ 
ದೇಶ

ಪೋಕ್ಸೋ ಕಾಯ್ದೆಯಡಿ ಲೈಂಗಿಕ ದೌರ್ಜನ್ಯಕ್ಕೆ 'ಸ್ಪರ್ಶ' ಸಂಪರ್ಕ ಪರಿಗಣನೆಯಲ್ಲ: ಸುಪ್ರೀಂ ಕೋರ್ಟ್

ಪೋಕ್ಸೋ ಕಾಯ್ದೆಯಡಿ ಲೈಂಗಿಕ ದೌರ್ಜನ್ಯ ಅಪರಾಧ ಪ್ರಕರಣ ದಾಖಲಾಗಲು ಸ್ಪರ್ಶ (skin-to-skin)ವು ಕೂಡ ಕಾರಣವಾಗುತ್ತದೆ ಎಂದಿದ್ದ ಬಾಂಬೆ ಹೈಕೋರ್ಟ್​ನ ತೀರ್ಪನ್ನು ಸುಪ್ರೀಂಕೋರ್ಟ್​ ತಳ್ಳಿಹಾಕಿದೆ.

ನವದೆಹಲಿ: ಪೋಕ್ಸೋ ಕಾಯ್ದೆಯಡಿ ಲೈಂಗಿಕ ದೌರ್ಜನ್ಯ ಅಪರಾಧ ಪ್ರಕರಣ ದಾಖಲಾಗಲು ಸ್ಪರ್ಶ (skin-to-skin)ವು ಕಾರಣವಾಗುತ್ತದೆ ಎಂದಿದ್ದ ಬಾಂಬೆ ಹೈಕೋರ್ಟ್​ನ ತೀರ್ಪನ್ನು ಸುಪ್ರೀಂಕೋರ್ಟ್​ ತಳ್ಳಿಹಾಕಿದೆ.

ನ್ಯಾಯಮೂರ್ತಿಗಳಾದ ಯುಯು ಲಲಿತ್, ಎಸ್ ರವೀಂದ್ರ ಭಟ್ ಮತ್ತು ಬೇಲಾ ತ್ರಿವೇದಿ ಅವರ ಪೀಠವು ಸ್ಪರ್ಶ ಎಂಬ ಅರ್ಥವನ್ನು ನೇರ ನೇರ ಸಂಪರ್ಕಕ್ಕೆ ಹೋಲಿಸುವುದು ಸಂಕುಚಿತ ಮತ್ತು ಅಸಂಬದ್ಧ ವ್ಯಾಖ್ಯಾನಕ್ಕೆ ಕಾರಣವಾಗುತ್ತದೆ. ಇದು ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸಲು ಜಾರಿಗೆ ತಂದ ಕಾಯ್ದೆಯ ಉದ್ದೇಶಕ್ಕೆ ವಿರುದ್ಧವಾಗಿದೆ ಎಂದು ಹೇಳಿದೆ.

ಲೈಂಗಿಕ ಉದ್ದೇಶದಿಂದ ಬಟ್ಟೆ/ಹಾಳೆಯ ಮೂಲಕ ಸ್ಪರ್ಶಿಸುವುದು ಕೂಡ POCSO ವ್ಯಾಖ್ಯಾನದಲ್ಲಿ ಒಳಗೊಂಡಿದೆ. ಸರಳವಾದ ಪದಗಳಲ್ಲಿ ದ್ವಂದ್ವಾರ್ಥತೆಯನ್ನು ಹುಡುಕುವಲ್ಲಿ ನ್ಯಾಯಾಲಯಗಳು ಅತಿಯಾದ ಉತ್ಸಾಹ ತೋರಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಬಾಂಬೆ ಹೈಕೋರ್ಟ್ ನ ನಾಗ್ಪುರ ಪೀಠ ಜನವರಿ 12 ರ ತೀರ್ಪಿನ ವಿರುದ್ಧ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್, ಎನ್ ಸಿಡಬ್ಲ್ಯೂ ಮತ್ತು ಮಹಾರಾಷ್ಟ್ರ ರಾಜ್ಯವು ಸಲ್ಲಿಸಿದ ಮೇಲ್ಮನವಿಗಳ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ಅವಲೋಕನಗಳನ್ನು ಮಾಡಿದೆ. ಜನವರಿ 27 ರಂದು, ಸುಪ್ರೀಂಕೋರ್ಟ್ ಪೋಕ್ಸೊ ಕಾಯ್ದೆಯಡಿಯಲ್ಲಿ ವ್ಯಕ್ತಿಯೊಬ್ಬನನ್ನು ದೋಷಮುಕ್ತಗೊಳಿಸಿದ ಆದೇಶಕ್ಕೆ ತಡೆ ನೀಡಿತ್ತು.

ಪುರುಷ ತನ್ನ ಬಟ್ಟೆಯನ್ನು ತೆಗೆಯದೆ ಮಗುವನ್ನು ಹಿಡಿದಿದ್ದರಿಂದ, ಈ ಅಪರಾಧವನ್ನು ಲೈಂಗಿಕ ದೌರ್ಜನ್ಯ ಎಂದು ಕರೆಯಲಾಗುವುದಿಲ್ಲ. ಆದರೆ ಇದು ಐಪಿಸಿ ಸೆಕ್ಷನ್ 354 ರ ಅಡಿಯಲ್ಲಿ ಅಪರಾಧವಾಗಿದೆ ಎಂದು ನ್ಯಾಯಮೂರ್ತಿ ಪುಷ್ಪಾ ಗಣೆಡಿವಾಲಾ ಹೇಳಿದ್ದರು.

2016 ರಲ್ಲಿ 12 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 39 ವರ್ಷದ ವ್ಯಕ್ತಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಮಾರ್ಪಡಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ