ರಾಕೇಶ್ ಟಿಕಾಯತ್ 
ದೇಶ

ಸಂಸತ್ತಿನಲ್ಲಿ ಮಸೂದೆ ರದ್ದಾಗುವವರೆಗೂ ಪ್ರತಿಭಟನೆ ಮುಂದುವರೆಯಲಿದೆ: ರಾಕೇಶ್ ಟಿಕಾಯತ್

ಸಂಸತ್ತಿನಲ್ಲಿ 3 ಕೃಷಿ ಮಸೂದೆ ರದ್ದಾಗುವವರೆಗೂ ನಮ್ಮ ಪ್ರತಿಭಟನೆ ಮುಂದುವರೆಯಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಅವರು ಶುಕ್ರವಾರ ಹೇಳಿದ್ದಾರೆ.

ನವದೆಹಲಿ: ಸಂಸತ್ತಿನಲ್ಲಿ 3 ಕೃಷಿ ಮಸೂದೆ ರದ್ದಾಗುವವರೆಗೂ ನಮ್ಮ ಪ್ರತಿಭಟನೆ ಮುಂದುವರೆಯಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ಮೋದಿ ಅವರು, ನೂತನವಾಗಿ ಜಾರಿಗೆ ತರಲಾಗಿರುವ ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿದ್ದಾರೆ.

ಕೇಂದ್ರ ಸರ್ಕಾರ ಈ ನಿರ್ಧಾರ ಬೆನ್ನಲ್ಲೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಕೇಶ್ ಟಿಕಾಯತ್ ಅವರು, ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ.ಸಂಸತ್ತಿನಲ್ಲಿ ಕೃಷಿ ಕಾನೂನುಗಳನ್ನು ರದ್ದುಪಡಿಸುವ ದಿನಕ್ಕಾಗಿ ನಾವು ಕಾಯುತ್ತೇವೆ. ಎಂಎಸ್'ಪಿ ಜೊತೆಗೆ ರೈತರ ಇತರೆ ಸಮಸ್ಯೆಗಳ ಬಗ್ಗೆಯೂ ಸರ್ಕಾರ ಮಾತನಾಡಬೇಕು ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ವಿವಾದಿತ ಕಾನೂನನ್ನು ಹಿಂದಕ್ಕೆ ತೆಗೆದುಕೊಂಡಿದೆ, ಇದೀಗ ಸಂಸತ್ತಿನಲ್ಲಿ ಈ ಕಾಯ್ದೆಗಳು ರದ್ದುಕೊಳ್ಳಬೇಕು. ಇಂದು ಸಂಯುಕ್ತ ಮೋರ್ಚಾ ಸಭೆ ನಡೆಯಲಿದೆ. ಎಲ್ಲಾ ವಿಚಾರಗಳ ಕುರಿತು ಸಭೆಯಲ್ಲಿ ನಿರ್ಧರಿಸಲಾಗುತ್ತದೆ. ಎಂಎಸ್‌ಪಿ ಕೂಡ ಒಂದು ಸಮಸ್ಯೆಯಾಗಿದೆ. ಇತರ ವಿಷಯಗಳ ಬಗ್ಗೆ ಸರ್ಕಾರದೊಂದಿಗೆ ಮಾತುಕತೆ ನಡೆಸಲು ಸಮಿತಿಯನ್ನು ರಚಿಸಲಾಗುತ್ತದೆ.

ಈಗಲೇ ನಮ್ಮ ಪ್ರತಿಭಟನೆ ಅಂತ್ಯಗೊಳ್ಳುವುದಿಲ್ಲ. ಸಂಯುಕ್ತ ಮೋರ್ಚಾದ 9 ಮಂದಿಯ ಸಮಿತಿಯು ಇಂದು ಸಭೆ ನಡೆಸಿ ಕಾನೂನು ಬದ್ಧವಾಗಿ ಕಾರ್ಯನಿರ್ವಹಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಕೇಂದ್ರದ ನಿರ್ಧಾರ ಸ್ವಾಗತಿಸಿದ ಸಂಯುಕ್ತ ಕಿಸಾನ್ ಮೋರ್ಚಾ
ಮೂರು ಕೃಷಿ ಮಸೂದೆಗಳ ರದ್ದು ಪಡಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸಂಯುಕ್ತ ಕಿಸಾನ್ ಮೋರ್ಚಾ ಸ್ವಾಗತಿಸಿದೆ.

ಎಲ್ಲಾ 3 ರೈತ ವಿರೋಧಿ ಕಾನೂನುಗಳನ್ನು ರದ್ದುಗೊಳಿಸುವ ಪ್ರಧಾನಿ ನರೇಂದ್ರ ಮೋದಿಯವರ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ. ಮಸೂದೆಗಳ ರದ್ದು ಕುರಿತು ಸಂಸತ್ತಿನ ಕಾರ್ಯವಿಧಾನಗಳ ಮೂಲಕ ಜಾರಿಯಾಗುವ ಘೋಷಣೆಗಾಗಿ ಕಾಯುತ್ತೇವೆ. ಇದು ಸಾಧ್ಯವಾದರೆ, ಇದು ಭಾರತದಲ್ಲಿ ಒಂದು ವರ್ಷದ ರೈತರ ಹೋರಾಟಕ್ಕೆ ಐತಿಹಾಸಿಕ ವಿಜಯ ಸಿಕ್ಕಂತಾಗುತ್ತದೆ ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚುನಾವಣಾ ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!