ದೆಹಲಿ ಭಾಗದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳ(ಸಂಗ್ರಹ ಚಿತ್ರ) 
ದೇಶ

ಕೃಷಿ ಕಾನೂನುಗಳ ವರದಿಯನ್ನು ನ್ಯಾಯಾಲಯ ಬಿಡುಗಡೆ ಮಾಡದಿದ್ದರೆ ನಾವೇ ಬಿಡುಗಡೆ ಮಾಡುತ್ತೇವೆ: ಸುಪ್ರೀಂ ಕೋರ್ಟ್ ಸಮಿತಿ ಸದಸ್ಯ!

ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಕೇಂದ್ರ ಸರ್ಕಾರ ಪ್ರಕಟಿಸುತ್ತಿದ್ದಂತೆ ಸುಪ್ರೀಂ ಕೋರ್ಟ್ ನೇಮಿಸಿರುವ ತಂಡದ ಸದಸ್ಯರೊಬ್ಬರು ವರದಿಯನ್ನು ಸಾರ್ವಜನಿಕರ ಮುಂದೆ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

ನವದೆಹಲಿ: ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಕೇಂದ್ರ ಸರ್ಕಾರ ಪ್ರಕಟಿಸುತ್ತಿದ್ದಂತೆ ಸುಪ್ರೀಂ ಕೋರ್ಟ್ ನೇಮಿಸಿರುವ ತಂಡದ ಸದಸ್ಯರೊಬ್ಬರು ವರದಿಯನ್ನು ಸಾರ್ವಜನಿಕರ ಮುಂದೆ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿ ಈಗಾಗಲೇ ಕಾಯ್ದೆಗೆ ಸಂಬಂಧಿಸಿದ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು.ಇದೀಗ ಕೇಂದ್ರ ಸರ್ಕಾರವೇ ಕಾಯ್ದೆಯನ್ನು ಹಿಂಪಡೆಯುವುದರಿಂದ ಈ ವರದಿಯ ಉದ್ದೇಶವೇನೂ ಇಲ್ಲದಾಗಿದೆ, ಸುಪ್ರೀಂ ಕೋರ್ಟ್ ವರದಿ ಬಿಡುಗಡೆ ಮಾಡದಿದ್ದರೆ ನಾವೇ ಸಾರ್ವಜನಿಕರ ಮುಂದಿಡುತ್ತೇವೆ ಎಂದಿದ್ದಾರೆ.

ಸಮಿತಿಯ ವರದಿ ರೈತರ ಪರವಾಗಿದ್ದಿತ್ತು. ಮುಂದಿನ ವಾರ ವರದಿಯನ್ನು ಬಿಡುಗಡೆ ಮಾಡುವುದಾಗಿ ಶೆಟ್ಕರಿ ಸಂಘಟನೆ ಅಧ್ಯಕ್ಷ ಅನಿಲ್ ಜೆ ಘನ್ವಾಟ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ಸಾಧಕ-ಬಾಧಕಗಳ ಬಗ್ಗೆ ಸಂಬಂಧಪಟ್ಟವರೊಂದಿಗೆ ಸಮಾಲೋಚನೆ ನಡೆಸಿ ಅಧ್ಯಯನ ಮಾಡಿ ಮೂವರು ಸದಸ್ಯರನ್ನೊಳಗೊಂಡ ಸುಪ್ರೀಂ ಕೋರ್ಟ್ ನೇಮಕ ಮಾಡಿರುವ ಸಮಿತಿ ಕಳೆದ ಮಾರ್ಚ್ 19ರಂದು ಸುಪ್ರೀಂ ಕೋರ್ಟ್ ಗೆ ವರದಿ ಸಲ್ಲಿಸಿತ್ತು.

ಸಮಿತಿಯ ವರದಿಯನ್ನು ಬಿಡುಗಡೆ ಮಾಡಿದರೆ ರೈತರಿಗೆ ಮನದಟ್ಟಾಗುತ್ತದೆ, ಸರ್ಕಾರ ವಿರುದ್ಧ ಮಾಡುತ್ತಿರುವ ಪ್ರತಿಭಟನೆ ನಿಲ್ಲುತ್ತದೆ ಎಂದು ಘನವಟ್ ಕಳೆದ ಸೆಪ್ಟೆಂಬರ್ 1 ರಂದು ಭಾರತದ ಮುಖ್ಯ ನ್ಯಾಯಾಧೀಶರಿಗೆ ಪತ್ರದ ಮೂಲಕ ವಿನಂತಿ ಮಾಡಿಕೊಂಡಿದ್ದರು. ಆದರೆ ವರದಿಯನ್ನು ಇನ್ನೂ ಸಾರ್ವಜನಿಕಗೊಳಿಸಲಾಗಿಲ್ಲ.

ಈ ಬಗ್ಗೆ ಪಿಟಿಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ಘನವಟ್, ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದರೆ ನಾವು ಸಲ್ಲಿಸಿರುವ ವರದಿಗೆ ಯಾವುದೇ ಅರ್ಥವಿಲ್ಲ. ಸುಪ್ರೀಂ ಕೋರ್ಟ್ ಜನರಿಗೆ ನಮ್ಮ ವರದಿಯನ್ನು ಬಿಡುಗಡೆ ಮಾಡದಿದ್ದರೆ ನಾನು ಬಹಿರಂಗಪಡಿಸುತ್ತೇನೆ ಎಂದಿರುವ ಅವರು ವರದಿ ತಯಾರಿಸಲು ಮೂರು ತಿಂಗಳು ತೆಗೆದುಕೊಂಡಿದ್ದೆವು ಎನ್ನುತ್ತಾರೆ. 

ರೈತರ ಹಿತದೃಷ್ಟಿಯಿಂದ ಸಮಿತಿಗಳ ವರದಿಯನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಲು ಮುಂದಾಗುತ್ತೇನೆ. ಸಮಿತಿ ಮಾಡಿರುವ ಶಿಫಾರಸ್ಸುಗಳನ್ನು ರೈತರು, ಪತ್ರಿಕೆಗಳು ಮತ್ತು ಸರಕಾರ ಅರಿಯಬೇಕು,’’ ಎಂದು ಹೇಳಿದ ಅವರು, ವರದಿಯು ರೈತರ ಪರವಾಗಿದೆ. ಕೃಷಿಗೆ ಸಂಬಂಧಿಸಿದ ಭವಿಷ್ಯದ ಕಾನೂನುಗಳನ್ನು ರೂಪಿಸಲು ವರದಿಯು ಉತ್ತಮ ಉಲ್ಲೇಖವಾಗಲಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!