ಕದಿರಿಯಲ್ಲಿ ಕುಸಿದ ಕಟ್ಟಡ 
ದೇಶ

ಆಂಧ್ರ ಪ್ರದೇಶದಲ್ಲಿ ಮಳೆ ದುರಂತ: 3 ಅಂತಸ್ತಿನ ಮನೆ ಕುಸಿದು, 4 ಮಂದಿ ಸಾವು

ಭಾರಿ ಮಳೆ ಮತ್ತು ಭೀಕರ ಪ್ರವಾಹಕ್ಕೆ ತುತ್ತಾಗಿರುವ ಆಂಧ್ರ ಪ್ರದೇಶದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಕದಿರಿ ಪಟ್ಟಣದಲ್ಲಿ ಕಟ್ಟಡವೊಂದು ಕುಸಿದು ನಾಲ್ಕು ಮಂದಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.

ಅನಂತಪುರ: ಭಾರಿ ಮಳೆ ಮತ್ತು ಭೀಕರ ಪ್ರವಾಹಕ್ಕೆ ತುತ್ತಾಗಿರುವ ಆಂಧ್ರ ಪ್ರದೇಶದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಕದಿರಿ ಪಟ್ಟಣದಲ್ಲಿ ಕಟ್ಟಡವೊಂದು ಕುಸಿದು ನಾಲ್ಕು ಮಂದಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.

ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ಇತಿಹಾಸ ಪ್ರಸಿದ್ಧ ಕದಿರಿ ಪಟ್ಟಣದಲ್ಲಿ ಈ ದುರಂತ ಸಂಭವಿಸಿದ್ದು, ನಿರಂತರ ಮಳೆಯಿಂದಾಗಿ ಇಲ್ಲಿನ ಓಲ್ಡ್ ಚೇರ್ಮನ್ ಸ್ಟ್ರೀಟ್‌ನಲ್ಲಿರುವ ಎರಡು ಅಂತಸ್ತಿನ ಕಟ್ಟಡ ಕುಸಿದಿದೆ. ಪರಿಣಾಮ ಮನೆಯಲ್ಲಿದ್ದ ಮೂರು ಮಕ್ಕಳು, ಓರ್ವ ಹಿರಿಯ ಮಹಿಳೆ ಕಟ್ಟಡದ ಅವಶೇಷಗಳಡಿ ಸಿಲುಕಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮತ್ತೊಬ್ಬ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. 

ಹಳೆಯಕಟ್ಟಡದ ಮೇಲೆ ಕುಸಿದ ನಿರ್ಮಾಣ ಹಂತದ ಕಟ್ಟಡ
ಇನ್ನು ಮಹಿಳೆ ಮತ್ತು ಮಕ್ಕಳು ಇದ್ದ ಮನೆಯ ಪಕ್ಕದಲ್ಲೇ ಮತ್ತೊಂದು ಮನೆ ನಿರ್ಮಾಣವಾಗುತ್ತಿತ್ತು. ಮಳೆಯಿಂದಾಗಿ ನಿರ್ಮಾಣ ಹಂತದ ಮನೆಯ ಅಡಿಪಾಯ ಹಾಳಾಗಿತ್ತು. ಹೀಗಾಗಿ ಆ ಮನೆ ಹಳೆಯ ಮನೆ ಮೇಲೆ ಕುಸಿದು ಈ ಅವಘಡ ಸಂಭವಿಸಿದೆ. ಕಟ್ಟಡದ ಅವಶೇಷಗಳಡಿಯಲ್ಲಿ ಸುಮಾರು 10 ಮಂದಿ ಸಿಲುಕಿರುವ ಶಂಕೆ ಇದ್ದು, ತತ್ ಕ್ಷಣವೇ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಅವಶೇಷಗಳಡಿಯಿಂದ ಆರು ಜನರನ್ನು ಹೊರತೆಗೆದಿದ್ದಾರೆ. 

ಈ ಕುರಿತು ಮಾಹಿತಿ ನೀಡಿರುವ ಅಧಿಕಾರಿಗಳು ಪಿಲ್ಲರ್‌ಗಳಿಲ್ಲದೆ ನಾಲ್ಕು ಅಂತಸ್ತಿನ ಕಟ್ಟಡವನ್ನು ನಿರ್ಮಿಸಿರುವುದು ಅಪಘಾತಕ್ಕೆ ಕಾರಣ ಎಂದು ಶಂಕಿಸಿದ್ದಾರೆ. ಕಟ್ಟಡ ಕುಸಿದಿದ್ದು, ಸುತ್ತಲಿನ ಇತರ ಎರಡು ಮನೆಗಳಿಗೆ ಸಣ್ಣಪುಟ್ಟ ಹಾನಿಯಾಗಿದೆ. ಜೆಸಿಬಿ ಮೂಲಕ ಅವಶೇಷಗಳನ್ನು ತೆಗೆಯುವ ಕಾರ್ಯ ಮುಂದುವರಿದಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್

3rd T20I: ಆಲೌಟ್ ನಲ್ಲೂ ವಿಚಿತ್ರ ದಾಖಲೆ ಬರೆದ ಟೀಂ ಇಂಡಿಯಾ!

"ಜಗತ್ತಿಗೆ ಅಗತ್ಯವಿರುವ ಪರಿಹಾರಗಳು ನಿಮ್ಮಲ್ಲಿವೆ": ಚೆನ್ನೈನಲ್ಲಿ 'Gen Z ಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು

3rd T20I: ಅಭಿಷೇಕ್ ಶರ್ಮಾ ಭರ್ಜರಿ ಬ್ಯಾಟಿಂಗ್, ವಿಂಡೀಸ್ ಗೆ ಗೆಲ್ಲಲು 224 ರನ್ ಗುರಿ ನೀಡಿದ ಭಾರತ