ಸಚಿನ್ ಪೈಲಟ್ 
ದೇಶ

ರಾಜಸ್ಥಾನ: ಸಚಿವ ಸಂಪುಟ ಪುನಾರಚನೆಯಿಂದ ಸಚಿನ್ ಪೈಲಟ್ ಫುಲ್ ಖುಷ್!

ರಾಜಸ್ಥಾನದಲ್ಲಿ ತಿಂಗಳ ಕಾಲ ನಡೆದ ಗೊಂದಲದ ನಡುವೆ ಇಂದು ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರ ಮಾಡಲಿದೆ. ಇದೇ ವೇಳೆ ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಸುದ್ದಿಗೋಷ್ಠಿ ನಡೆಸಿ ಸಚಿವ ಸಂಪುಟದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. 

ರಾಜಸ್ಥಾನ: ರಾಜಸ್ಥಾನದಲ್ಲಿ ತಿಂಗಳ ಕಾಲ ನಡೆದ ಗೊಂದಲದ ನಡುವೆ ಇಂದು ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರ ಮಾಡಲಿದೆ. ಇದೇ ವೇಳೆ ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಸುದ್ದಿಗೋಷ್ಠಿ ನಡೆಸಿ ಸಚಿವ ಸಂಪುಟದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. 

ನೂತನ ಸಚಿವ ಸಂಪುಟ ಪಟ್ಟಿಯಿಂದ ಜನರಿಗೆ ಉತ್ತಮ ಸಂದೇಶ ರವಾನೆಯಾಗಿದೆ. ಪಕ್ಷದಲ್ಲಿ ಕೆಲವು ಲೋಪದೋಷಗಳಿದ್ದು, ಅವುಗಳನ್ನು ಭರ್ತಿ ಮಾಡಲಾಗಿದೆ. ಸಚಿವ ಸಂಪುಟ ಪುನಾರಚನೆಗೊಂಡಿದ್ದಕ್ಕೆ ಸೋನಿಯಾ ಗಾಂಧಿ, ಅಶೋಕ್ ಗೆಹ್ಲೋಟ್ ಮತ್ತು ಅಜಯ್ ಮಾಕನ್ ಅವರಿಗೆ ಪೈಲಟ್ ಧನ್ಯವಾದ ತಿಳಿಸಿದರು.

ದಲಿತ ಸಮಾಜದ ನಾಲ್ವರು ಕ್ಯಾಬಿನೆಟ್ ಮಂತ್ರಿಗಳನ್ನು ಮಾಡಿರುವುದು ತುಂಬಾ ಒಳ್ಳೆಯದಾಗಿದೆ. ಆದಿವಾಸಿ ಜನಾಂಗಕ್ಕೆ ಸೂಕ್ತ ಪ್ರಾತಿನಿಧ್ಯ ಸಿಕ್ಕಿದೆ. ಎಲ್ಲರ ಒಪ್ಪಿಗೆ ಪಡೆದು ನೂತನ ಸಚಿವ ಸಂಪುಟ ರಚನೆ ಮಾಡಲಾಗಿದೆ ಎಂದು ತಿಳಿಸಿದರು. ದೆಹಲಿ ಮತ್ತು ರಾಜಸ್ಥಾನದ ನಾಯಕರು ಒಟ್ಟಾಗಿ ಸೇರಿ ಹೊಸ ಸಚಿವ ಸಂಪುಟವನ್ನು ಸಿದ್ಧಪಡಿಸಿದ್ದಾರೆ ಅಂತಾ ಪೈಲಟ್ ತಿಳಿಸಿದರು.

ಪೈಲಟ್ ಬಣ ಅಶೋಕ್ ಬಣದಿಂದ ಮಂತ್ರಿಯಾಗಿದ್ದಾರೆ ಅಂತಾ ಹೇಳಲಾಗುತ್ತಿದೆ. ಆದರೆ,  ರಾಜಸ್ಥಾನದ ಕಾಂಗ್ರೆಸ್ ನಲ್ಲಿ ಯಾವುದೇ ಬಣವಿಲ್ಲ. 2018ರಲ್ಲಿ ನಾವು ಒಟ್ಟಾಗಿ ಚುನಾವಣೆಗಳನ್ನು ಎದುರಿಸಿದ್ದೇವೆ. ಹಾಗಾಗಿಯೇ ಕಾಂಗ್ರೆಸ್ ನಲ್ಲಿ ಒಂದೇ ಬಣ ಮತ್ತು ಅದು ಕಾಂಗ್ರೆಸ್ ಹೈಕಮಾಂಡ್ ನ ಬಣ. ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಸರ್ಕಾರ ರಚಿಸುವುದು ನಮ್ಮ ಗುರಿ. ಕಾಂಗ್ರೆಸ್ ನಲ್ಲಿ ಯಾವಾಗಲೂ ಸಾಮೂಹಿಕ ನಾಯಕತ್ವದ ಆಧಾರದ ಮೇಲೆ ಚುನಾವಣೆ ನಡೆಯುತ್ತದೆ. ಸೋನಿಯಾ ಗಾಂಧಿ ನೇತೃತ್ವದಲ್ಲಿ ಮುಂದಿನ ಚುನಾವಣೆಗೆ ಹೋಗುತ್ತೇವೆ ಅಂತಾ ಪೈಲಟ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT