ಸ್ಫೋಟ ಸಂಭವಿಸಿದ ಸ್ಥಳದಲ್ಲಿರುವ ಪೊಲೀಸರು, ಭದ್ರತಾ ಸಿಬ್ಬಂದಿಗಳು. 
ದೇಶ

ಪಠಾಣ್​ಕೋಟ್​ ಸೇನಾ ಗೇಟ್​ ಬಳಿ ಗ್ರೆನೇಡ್​​ ಸ್ಫೋಟ: ಎಲ್ಲಾ ಚೆಕ್ ಪೋಸ್ಟ್'ಗಳಲ್ಲೂ ಹೈ ಅಲರ್ಟ್​ ಘೋಷಣೆ

ಪಠಾಣ್‌ಕೋಟ್‌ನ ಧೀರಪುಲ್ ಬಳಿಯ ಭಾರತೀಯ ಸೇನೆಯ ತ್ರಿವೇಣಿ ಗೇಟ್‌ನಲ್ಲಿ ಸೋಮವಾರ ಮುಂಜಾನೆ ಗ್ರೆನೇಡ್ ಸ್ಫೋಟ ಸಂಭವಿಸಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.

ಪಂಜಾಬ್​​: ಪಠಾಣ್‌ಕೋಟ್‌ನ ಧೀರಪುಲ್ ಬಳಿಯ ಭಾರತೀಯ ಸೇನೆಯ ತ್ರಿವೇಣಿ ಗೇಟ್‌ನಲ್ಲಿ ಸೋಮವಾರ ಮುಂಜಾನೆ ಗ್ರೆನೇಡ್ ಸ್ಫೋಟ ಸಂಭವಿಸಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಸ್ಫೋಟ ಸಂಭವಿಸಿರುವ ಸ್ಥಳದಲ್ಲಿ ಮದುವೆ ಮೆರವಣಿಗೆ ಸಾಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಗೇಟ್ ಬಳಿ ಗ್ರೆನೇಡ್ ಎಸೆದು ಪರಾರಿಯಾಗಿದ್ದಾರೆಂದು ತಿಳಿದುಬಂದಿದೆ.

ಘಟನೆ ಬಳಿಕ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸ್ಥಳದಲ್ಲಿರುವ ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಈ ನಡುವೆ ಪಠಾಣ್‌ಕೋಟ್‌ನ ಎಲ್ಲಾ ಪೊಲೀಸ್ ಚೆಕ್‌ಪೋಸ್ಟ್‌ಗಳ್ಲಿಯೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಘಟನೆಯಲ್ಲಿ ಯಾವುದೇ ಗಾಯಗಳು ವರದಿಯಾಗಿಲ್ಲ. ಸ್ಥಳಕ್ಕೆ ಧಾವಿಸಿರುವ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದ ಗ್ರೆನೇಡ್‌ನ ಭಾಗಗಳನ್ನು ವಶಪಡಿಸಿಕೊಂಡಿದ್ದಾರೆಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭೋಜಶಾಲಾ ಸರಸ್ವತಿ ದೇವಸ್ಥಾನಕ್ಕೆ ಸೇರಿದ್ದು; ಮಸೀದಿಗೆ ಪರ್ಯಾಯ ಭೂಮಿ: ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು

ಕೊಪ್ಪಳ: ತುಂಗಭದ್ರಾ ಸೇತುವೆ ಮೇಲಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್, ಒಂದೇ ಕುಟುಂಬದ ಆರು ಮಂದಿ ದುರ್ಮರಣ!

ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ವಿರುದ್ಧ FIR ದಾಖಲು; ಇಲ್ಲಿದೆ ಕಾರಣ

ಕರ್ನಾಟಕದಲ್ಲಿ ಜೂನ್ 20 ರಿಂದ SIR ಪ್ರಾರಂಭ: ಅಕ್ಟೋಬರ್ 7ಕ್ಕೆ ಅಂತಿಮ ಪಟ್ಟಿ ಪ್ರಕಟ! ಹೇಗೆ ಮಾಡಲಾಗುತ್ತದೆ?

ಮಧ್ಯ ಪ್ರಾಚ್ಯ ಸಂಘರ್ಷ: ಪಾಕಿಸ್ತಾನದ ಸಂಧಾನ ಪ್ರಕ್ರಿಯೆ ವಿಫಲವಾಗಿಲ್ಲ, ಆದರೆ..: ಇರಾನ್ ವಿದೇಶಾಂಗ ಸಚಿವ Araghchi

SCROLL FOR NEXT