ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 8,488 ಹೊಸ ಪ್ರಕರಣ, 12,510 ಮಂದಿ ಗುಣಮುಖ, 249 ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಸೋಮವಾರ ಮತ್ತಷ್ಟು ಇಳಿಕೆಯಾಗಿದೆ. ದೇಶದಲ್ಲಿ ಸೋಮವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 8 ಸಾವಿರದ 488 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 249 ಮಂದಿ ಮೃತಪಟ್ಟಿದ್ದಾರೆ. ಇದು ಕಳೆದ 538 ದಿನಗಳಲ್ಲಿಯೇ ಅತಿ ಕಡಿಮೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಅಂಕಿಅಂಶ ತಿಳಿಸಿದೆ. 

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಸೋಮವಾರ ಮತ್ತಷ್ಟು ಇಳಿಕೆಯಾಗಿದೆ. ದೇಶದಲ್ಲಿ ಸೋಮವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 8 ಸಾವಿರದ 488 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 249 ಮಂದಿ ಮೃತಪಟ್ಟಿದ್ದಾರೆ. ಇದು ಕಳೆದ 538 ದಿನಗಳಲ್ಲಿಯೇ ಅತಿ ಕಡಿಮೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಅಂಕಿಅಂಶ ತಿಳಿಸಿದೆ. 

ದೇಶದಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 1 ಲಕ್ಷದ 18 ಸಾವಿರದ 443 ಇದ್ದು, ಕಳೆದ 534 ದಿನಗಳಲ್ಲಿಯೇ ಅತಿ ಕಡಿಮೆಯಾಗಿದೆ.ಒಟ್ಟು ಸೋಂಕಿತರ ಸಂಖ್ಯೆಯಲ್ಲಿ ಶೇಕಡಾ 1ಕ್ಕಿಂತ ಕಡಿಮೆಯಿದ್ದು ಕಳೆದ ವರ್ಷ ಮಾರ್ಚ್ ತಿಂಗಳಿನಿಂದ ಅತಿ ಕಡಿಮೆಯಾಗಿದೆ.  ಇನ್ನು 12 ಸಾವಿರದ 510 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. 

ಇಂದು 8 ಸಾವಿರದ 488 ಹೊಸ ಪ್ರಕರಣಗಳಲ್ಲಿ ಕೇರಳ ರಾಜ್ಯದಲ್ಲಿ 5 ಸಾವಿರದ 80 ಮಂದಿ ಕೇಸುಗಳು ವರದಿಯಾಗಿದ್ದು, 7 ಸಾವಿರದ 908 ಮಂದಿ ಗುಣಮುಖರಾಗಿದ್ದು 40 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ ದೇಶದಲ್ಲಿ ಕೋವಿಡ್ ನಿಂದ ಗುಣಮುಖ ಹೊಂದಿದವರ ಸಂಖ್ಯೆ 3 ಕೋಟಿಯ 39 ಲಕ್ಷದ 34 ಸಾವಿರದ 547 ಆಗಿದೆ. 

ಇನ್ನು ಭಾರತದಲ್ಲಿ ಒಂದೇ 7 ಲಕ್ಷದ 83 ಸಾವಿರದ 567 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 63 ಕೋಟಿಯ 25 ಲಕ್ಷದ 24 ಸಾವಿರದ 259 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 116.87 ಕೋಟಿ ಲಸಿಕೆ ಡೋಸ್ ನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!