ಪ್ರಧಾನಿ ನರೇಂದ್ರ ಮೋದಿ 
ದೇಶ

ಸಂಸತ್ ಚಳಿಗಾಲದ ಅಧಿವೇಶನ: ಸರ್ವ ಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿ ಭಾಗಿ ಸಾಧ್ಯತೆ

ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಭಾನುವಾರ ಸರ್ವ ಪಕ್ಷ ಸಭೆಯನ್ನು ಆಯೋಜಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಸಾಧ್ಯತೆಯಿರುವುದಾಗಿ ಮೂಲಗಳು ಸೋಮವಾರ ಹೇಳಿವೆ.

ನವದೆಹಲಿ: ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಭಾನುವಾರ ಸರ್ವ ಪಕ್ಷ ಸಭೆಯನ್ನು ಆಯೋಜಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಸಾಧ್ಯತೆಯಿರುವುದಾಗಿ ಮೂಲಗಳು ಸೋಮವಾರ ಹೇಳಿವೆ.

ಸಂಸತ್ತಿನ ಉಭಯ ಸದನಗಳ ಎಲ್ಲಾ ರಾಜಕೀಯ ಪಕ್ಷಗಳ ಸದನದ ನಾಯಕರನ್ನು ಸಭೆಗೆ ಆಹ್ವಾನಿಸಲಾಗಿದೆ ಎಂದು ಅವು ತಿಳಿಸಿವೆ.

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಹಿರಿಯ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಷಿ, ಸಭೆಯಲ್ಲಿ ಸರ್ಕಾರವನ್ನು ಪ್ರತಿನಿಧಿಸಲಿದ್ದಾರೆ. ರಾಜ್ಯಸಭೆ ಸಭಾಪತಿ ಎಂ. ವೆಂಕಯ್ಯ ನಾಯ್ಡು ಭಾನುವಾರ ಸಂಜೆ ಮೇಲ್ಮನೆಯ ಸದನದ ನಾಯಕರ ಸಭೆಯನ್ನು ಕರೆದಿದ್ದಾರೆ.

ಇದೇ ರೀತಿಯಲ್ಲಿ ನವೆಂಬರ್ 27 ರಂದು ಲೋಕಸಭೆಯಲ್ಲಿ ಸದನದ ನಾಯಕರುಗಳ ಸಭೆಯನ್ನು ಸ್ಪೀಕರ್ ಓಂ ಬಿರ್ಲಾ ಕರೆಯುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು!