ಸಾಂದರ್ಭಿಕ ಚಿತ್ರ 
ದೇಶ

ಶಾಲೆ ಬಸ್ ತಪ್ಪಿತೆಂದು ಮನನೊಂದ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಶರಣು!

ಶಾಲೆಗೆ ತೆರಳಬೇಕಿದ್ದ ಬಸ್ ತಪ್ಪಿತೆಂದು ಮನನೊಂದ 9 ನೇ ತರಗತಿ ವಿದ್ಯಾರ್ಥಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಅಘಾತಕಾರಿ ಘಟನೆ ಮಧ್ಯಪ್ರದೇಶದ ಬೆತುಲ್ ಜಿಲ್ಲೆಯಲ್ಲಿ ವರದಿಯಾಗಿದೆ. 

ಭೋಪಾಲ್: ಶಾಲೆಗೆ ತೆರಳಬೇಕಿದ್ದ ಬಸ್ ತಪ್ಪಿತೆಂದು ಮನನೊಂದ 9 ನೇ ತರಗತಿ ವಿದ್ಯಾರ್ಥಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಅಘಾತಕಾರಿ ಘಟನೆ ಮಧ್ಯಪ್ರದೇಶದ ಬೆತುಲ್ ಜಿಲ್ಲೆಯಲ್ಲಿ ವರದಿಯಾಗಿದೆ. 

ಆಮ್ಧೋಹ್ ಗ್ರಾಮದ ಘೋಡಾಡೋಂಗ್ರಿ ಪೋಲಿಸ್ ಪೋಸ್ಟ್ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ 14 ವರ್ಷದ ಬಾಲಕ ಖಾಸಗಿ ಶಾಲೆಯಲ್ಲಿ 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ರವಿ ಶಾಕ್ಯ ಮಾಹಿತಿ ನೀಡಿದ್ದಾರೆ.   

ಪೋಷಕರು ಪೊಲೀಸರಿಗೆ ನೀಡಿರುವ ಮಾಹಿತಿಯ ಪ್ರಕಾರ ಬಾಲಕ ಶಾಲೆಗಳಲ್ಲಿ ತಪ್ಪದೇ ತರಗತಿಗಳಿಗೆ ಸರಿಯಾದ ಸಮಯಕ್ಕೆ ಹಾಜರಾಗುತ್ತಿದ್ದ ಹಾಗೂ ವಿದ್ಯಾಭ್ಯಾಸದಲ್ಲಿ ಮುಂದಿದ್ದ. ಶಾಲೆಗೆ ಹೋಗುವ ಬಸ್ ತಪ್ಪಿದ್ದಕ್ಕಾಗಿ ಬಾಲಕ ತೀವ್ರವಾಗಿ ಮನನೊಂದು ಕಣ್ಣೀರು ಹಾಕುತ್ತಾ ಮನೆಗೆ ಬಂದಿದ್ದಾನೆ. ಈ ಬಳಿಕ ಮನೆಯ ಹಿಂಭಾಗದಲ್ಲಿದ್ದ ಮರವೊಂದಕ್ಕೆ ನೇಣುಬಿಗಿದುಕೊಂಡು ಸಾವನ್ನಪ್ಪಿದ್ದಾನೆ" ಎಂದು ಪೋಷಕರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿಯನ್ನು ಮುಚ್ಚಿಸಿದ್ದ ಇರಾನ್‌ನ IRGC ನೌಕಾಪಡೆ ಮುಖ್ಯಸ್ಥ ಅಲಿರೆಜಾನನ್ನು ಹೊಡೆದುರುಳಿಸಿದ ಇಸ್ರೇಲ್!

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್‌ಗೆ ಬಂಡಾಯದ ಬಿಸಿ, Muslim ಶಾಸಕರ ಮನವೊಲಿಕೆಗೂ ಜಗ್ಗದ ಸಾದಿಕ್ ಪೈಲ್ವಾನ್!

Iran war: ನಾಳೆ ಎಲ್ಲಾ ರಾಜ್ಯಗಳ ಸಿಎಂ ಜೊತೆಗೆ ಪ್ರಧಾನಿ ಸಭೆ, ಸಿದ್ದರಾಮಯ್ಯ ಭಾಗವಹಿಸುತ್ತಾರಾ?

ನಾವು VIPಗಳು, ಕ್ಯೂನಲ್ಲಿ ನಿಲ್ಲಲು ಸಾಧ್ಯವಿಲ್ಲ: ತಮ್ಮ ಕುಟುಂಬಕ್ಕೆ IPL ಟಿಕೆಟ್ ನೀಡುವಂತೆ ಸದನದಲ್ಲಿ ಶಾಸಕರ ಆಗ್ರಹ!

ಕಲಬುರಗಿ: ನಡುರಸ್ತೆಯಲ್ಲೇ ಪತ್ನಿ ಕತ್ತು ಕೊಯ್ದು ಹತ್ಯೆ; ಶವದ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದ ಪತಿಯ ಬಂಧನ

SCROLL FOR NEXT