ಅಮೆಜಾನ್ ಮೂಲಕ ಗಾಂಜಾ ಸಾಗಾಟ: ಮತ್ತೆ ನಾಲ್ವರನ್ನು ಬಂಧಿಸಿದ ಪೊಲೀಸರು
ಮಧ್ಯಪ್ರದೇಶ ಮತ್ತು ಆಂಧ್ರಪ್ರದೇಶದಿಂದ ಅಮೆಜಾನ್ ಮೂಲಕ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಮತ್ತೆ ನಾಲ್ವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 8 ಆರೋಪಿಗಳನ್ನು ಬಂಧಿಸಲಾಗಿದೆ.
ವಿಶಾಖಪಟ್ಟಣಂ: ಮಧ್ಯಪ್ರದೇಶ ಮತ್ತು ಆಂಧ್ರಪ್ರದೇಶದಿಂದ ಅಮೆಜಾನ್ ಮೂಲಕ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಮತ್ತೆ ನಾಲ್ವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 8 ಆರೋಪಿಗಳನ್ನು ಬಂಧಿಸಲಾಗಿದೆ.
ನವೆಂಬರ್ 13 ರಂದು ಮಧ್ಯಪ್ರದೇಶದ ಭಿಂಡ್ ಪೊಲೀಸರು ಮೊದಲು ಈ ಪ್ರಕರಣವನ್ನು ಭೇದಿಸಿದ್ದರು. ಇದೀಗ ವಿಶಾಖಪಟ್ಟಣಂ ಪೊಲೀಸರ ಭ್ರಷ್ಟಾಚಾರ ನಿಗ್ರಹ ದಳವು ಇಂದು ನಾಲ್ವರನ್ನು ಬಂಧಿಸಿದೆ.
ಭಿಂಡ್ ಎಸ್ಪಿ ಮನೋಜ್ ಸಿಂಗ್ ಅವರ ಪ್ರಕಾರ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶಾಖಪಟ್ಟಣಂನಿಂದ ನಾಲ್ವರನ್ನು ಬಂಧಿಸಲಾಗಿದೆ. ಇದುವರೆಗೆ ಒಟ್ಟು 68 ಕೆಜಿ ನಿಷಿದ್ಧ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿಶಾಖಪಟ್ಟಣಂನಲ್ಲಿ ಬಂಧಿತ ಮೂವರು ಆರೋಪಿಗಳಿಂದ ಎರಡು ಸೆಣಬಿನ ಚೀಲಗಳಲ್ಲಿ ಪ್ಯಾಕ್ ಮಾಡಲಾಗಿದ್ದ 48 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ಇದನ್ನು ಓದಿ: ಅಮೆಜಾನ್ ನಲ್ಲಿ ಡ್ರಗ್ಸ್? ಬೆಚ್ಚಿಬೀಳಿಸುವ ವಿಷಯ ಬಾಯ್ಬಿಟ್ಟ ಬಂಧಿತರು; ಈಗಾಗಲೆ 1.1 ಕೋಟಿ ರೂ. ಮೌಲ್ಯದ ಮಾದಕ ವಸ್ತು ಮಾರಾಟ!
ಇನ್ನೂ ನವೆಂಬರ್ 13 ರಂದು ಭಿಂಡ್ ಪೊಲೀಸರು ಬಂಧಿಸಿದ ಇಬ್ಬರಿಂದ 20 ಕೆಜಿ ಯನ್ನು ವಶಪಡಿಸಿಕೊಳ್ಳಲಾಗಿದೆ. ಈ ಗ್ಯಾಂಗ್ ಇದುವರೆಗೆ ಅಮೆಜಾನ್ ಮೂಲಕ 384 ಸರಕುಗಳಲ್ಲಿ 800 ಕೆಜಿ ಗಾಂಜಾವನ್ನು ಸಾಗಿಸಿರುವುದಾಗಿ ತಪ್ಪೊಪ್ಪಿಕೊಂಡಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.