ದೇಶ

ಜಯಲಲಿತಾ ನಿವಾಸ ಸ್ವಾಧೀನ ಆದೇಶ ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್, ಕಾನೂನುಬದ್ಧ ಉತ್ತರಾಧಿಕಾರಿಗಳಿಗೆ ವೇದ ನಿಲಯಂ

Lingaraj Badiger

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ ಅವರ ಆಳ್ವಾರಪೇಟೆಯ ಪೋಯಸ್ ಗಾರ್ಡನ್‌ನಲ್ಲಿರುವ ವೇದ ನಿಲಯಂ ನಿವಾಸವನ್ನು ಸ್ವಾಧೀನಪಡಿಸಿಕೊಳ್ಳುವ ಹಿಂದಿನ ಎಐಎಡಿಎಂಕೆ ಆದೇಶವನ್ನು ಮದ್ರಾಸ್ ಹೈಕೋರ್ಟ್ ಬುಧವಾರ ರದ್ದುಗೊಳಿಸಿದೆ. ಅಲ್ಲದೆ ಮಾಜಿ ಸಿಎಂ ಬಂಗಲೆಯನ್ನು ಅವರ ಕಾನೂನುಬದ್ಧ ವಾರಸುದಾರರಿಗೆ ಹಸ್ತಾಂತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ.

ಹಿಂದಿನ ಎಐಎಡಿಎಂಕೆ ಸರ್ಕಾರವು ಜಯಲಲಿತಾ ಅವರ ನಿವಾಸವನ್ನು ಸ್ವಾಧೀನಪಡಿಸಿಕೊಂಡು, ಅದನ್ನು ಸ್ಮಾರಕವನ್ನಾಗಿ ಪರಿವರ್ತಿಸಿತ್ತು. ಆದರೆ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಜಯಲಲಿತಾ ಅವರ ಏಕೈಕ ಸಹೋದರ ಜಯಕುಮಾರ್ ಅವರ ಮಕ್ಕಳಾದ ದೀಪಾ ಮತ್ತು ದೀಪಕ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್ ಶೇಷಸಾಯಿ ಅವರು ಈ ಮಹತ್ವದ ತೀರ್ಪು ನೀಡಿದ್ದಾರೆ.

“ಸರ್ಕಾರದ ಸ್ವಾಧೀನದ ಆದೇಶವನ್ನು ರದ್ದುಗೊಳಿಸಲಾಗಿದೆ. ಜಯಲಲಿತಾ ಅವರ ಕಾನೂನುಬದ್ಧ ವಾರಸುದಾರರಿಗೆ ವೇದ ನಿಲಯಂ ನಿವಾಸವನ್ನು ಹಸ್ತಾಂತರಿಸುವಂತೆ ಚೆನ್ನೈ ಜಿಲ್ಲಾಧಿಕಾರಿಗಳಿಗೆ ಮದ್ರಾಸ್ ಹೈಕೋರ್ಟ್ ಸೂಚಿಸಿದೆ.

"ವೇದ ನಿಲಯಂ ನಿವಾಸವನ್ನು ಚೆನ್ನೈ ಜಿಲ್ಲಾಧಿಕಾರಿಗಳು ಮೂರು ವಾರಗಳ ಅವಧಿಯಲ್ಲಿ ಅರ್ಜಿದಾರರಿಗೆ ಹಸ್ತಾಂತರಿಸುವಂತೆ ಸೂಚಿಸಲಾಗಿದೆ" ಎಂದು ನ್ಯಾಯಮೂರ್ತಿ ಶೇಷಸಾಯಿ ಅವರು ಹೇಳಿದ್ದಾರೆ.

ಜಯಲಲಿತಾ ಅವರ ಮರಣದ ನಂತರ ತಮಿಳುನಾಡು ಸರ್ಕಾರವು 2017 ರಲ್ಲಿ ಪೋಯಸ್ ಗಾರ್ಡನ್ ಬಂಗಲೆಯನ್ನು ಅವರ ಸ್ಮಾರಕವಾಗಿ ಪರಿವರ್ತಿಸುವುದಾಗಿ ಘೋಷಿಸಿತ್ತು.

SCROLL FOR NEXT