ದೆಹಲಿ ಪರಿಸರ ಖಾತೆ ಸಚಿವ ಗೋಪಾಲ್ ರೈ 
ದೇಶ

ದೆಹಲಿಯಲ್ಲಿ ನವೆಂಬರ್ 29 ರಿಂದ ಶಾಲಾ-ಕಾಲೇಜುಗಳು ಪುನರಾರಂಭ: ಪರಿಸರ ಸಚಿವ ಗೋಪಾಲ್ ರೈ

ಅಧಿಕ ವಾಯುಮಾಲಿನ್ಯದ ಕಾರಣದಿಂದ ಬಂದ್ ಆಗಿದ್ದ ಶಾಲಾ- ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳಲ್ಲಿ ನವೆಂಬರ್ 29 ರಿಂದ ದೈಹಿಕ ತರಗತಿಗಳು ಪುನರಾರಂಭಗೊಳ್ಳಲಿವೆ...

ನವದೆಹಲಿ: ಅಧಿಕ ವಾಯುಮಾಲಿನ್ಯದ ಕಾರಣದಿಂದ ಬಂದ್ ಆಗಿದ್ದ ಶಾಲಾ- ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳಲ್ಲಿ ನವೆಂಬರ್ 29 ರಿಂದ ದೈಹಿಕ ತರಗತಿಗಳು ಪುನರಾರಂಭಗೊಳ್ಳಲಿವೆ ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ ಅವರು ಬುಧವಾರ ಹೇಳಿದ್ದಾರೆ.

ಸೋಮವಾರದಿಂದ ಎಲ್ಲಾ ಸರ್ಕಾರಿ ಕಚೇರಿಗಳು ತೆರೆಯಲಿವೆ ಎಂದು ತಿಳಿಸಿದ ಸಚಿವರು, ಸರ್ಕಾರಿ ನೌಕರರು ಸಾರ್ವಜನಿಕ ಸಾರಿಗೆ ಬಳಸಬೇಕು ಒತ್ತಾಯಿಸಿದರು ಮತ್ತು ಅವರಿಗಾಗಿ ವಿಶೇಷ ಬಸ್‌ಗಳನ್ನು ನಿಯೋಜಿಸಲಾಗುವುದು ಎಂದು ಹೇಳಿದ್ದಾರೆ.

ಅಗತ್ಯ ಸೇವೆಗಳಲ್ಲಿ ತೊಡಗಿರುವವರನ್ನು ಹೊರತುಪಡಿಸಿ ಸಿಎನ್‌ಜಿ ಮತ್ತು ಎಲೆಕ್ಟ್ರಿಕ್ ವಾಹನಗಳನ್ನು ಮಾತ್ರ ನವೆಂಬರ್ 27 ರಿಂದ ದೆಹಲಿ ಪ್ರವೇಶಿಸಲು ಅನುಮತಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಇತರ ಇಂಧನ ಬಳಸುವ ವಾಹನಗಳ ಪ್ರವೇಶದ ಮೇಲಿನ ನಿಷೇಧವನ್ನು ಡಿಸೆಂಬರ್ 3 ರವರೆಗೆ ಇರುತ್ತದೆ ಎಂದು ರೈ ಅವರು ಹಿರಿಯ ಅಧಿಕಾರಿಗಳೊಂದಿಗೆ ನಡೆದ ಪರಿಶೀಲನಾ ಸಭೆಯ ನಂತರ ಹೇಳಿದ್ದಾರೆ.

ಗಾಳಿಯ ಗುಣಮಟ್ಟದಲ್ಲಿ ಸುಧಾರಣೆಯಾದ ಹಿನ್ನೆಲೆಯಲ್ಲಿ ಮತ್ತು ಕಾರ್ಮಿಕರಿಗೆ ಉಂಟಾಗುವ ಅನಾನುಕೂಲತೆಯ ದೃಷ್ಟಿಯಿಂದ ದೆಹಲಿ ಸರ್ಕಾರವು ನಿರ್ಮಾಣ ಮತ್ತು ನೆಲಸಮ ಚಟುವಟಿಕೆಗಳ ಮೇಲಿನ ನಿಷೇಧವನ್ನು ಸೋಮವಾರ ತೆಗೆದುಹಾಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಾಂತಿ ಮಾತುಕತೆ ವಿಫಲ: ಅಮೆರಿಕ ಟೆಹ್ರಾನ್‌ನ ವಿಶ್ವಾಸ ಗಳಿಸಲು ಸಾಧ್ಯವಾಗಲಿಲ್ಲ; ಇರಾನ್ ಸ್ಪೀಕರ್

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

SCROLL FOR NEXT