ರಾಜೇಂದ್ರ ಸಿಂಗ್ ಗುಢಾ 
ದೇಶ

ಕತ್ರಿನಾ ಕೈಫ್ ಕೆನ್ನೆಯಂತಹ ರಸ್ತೆ ಮಾಡಬೇಕು: ರಾಜಸ್ಥಾನ ಸಚಿವರಿಂದ ವಿವಾದಾತ್ಮಕ ಹೇಳಿಕೆ

ಹೊಸದಾಗಿ ನೇಮಕಗೊಂಡ ರಾಜಸ್ಥಾನ ಸಚಿವ ರಾಜೇಂದ್ರ ಸಿಂಗ್ ಗುಢಾ ಅವರು ರಾಜ್ಯದ ರಸ್ತೆಗಳನ್ನು ಬಾಲಿವುಡ್ ನಟಿ ಕತ್ರಿನಾ ಕೈಫ್ ಅವರ ಕೆನ್ನೆಗೆ ಹೋಲಿಸಿದ್ದಾರೆ. ಈ ಹೇಳಿಕೆ ವೈರಲ್ ಆದ ನಂತರ ವಿವಾದಕ್ಕೆ ಕಾರಣವಾಗಿದೆ.

ಜೈಪುರ: ಹೊಸದಾಗಿ ನೇಮಕಗೊಂಡ ರಾಜಸ್ಥಾನ ಸಚಿವ ರಾಜೇಂದ್ರ ಸಿಂಗ್ ಗುಢಾ ಅವರು ರಾಜ್ಯದ ರಸ್ತೆಗಳನ್ನು ಬಾಲಿವುಡ್ ನಟಿ ಕತ್ರಿನಾ ಕೈಫ್ ಅವರ ಕೆನ್ನೆಗೆ ಹೋಲಿಸಿದ್ದಾರೆ. ಈ ಹೇಳಿಕೆ ವೈರಲ್ ಆದ ನಂತರ ವಿವಾದಕ್ಕೆ ಕಾರಣವಾಗಿದೆ.

ಆನ್‌ಲೈನ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವಿಡಿಯೋದಲ್ಲಿ, ಸಚಿವರು ತಮ್ಮ ವಿಧಾನಸಭಾ ಕ್ಷೇತ್ರವಾದ ಉದಯಪುರವತಿಯಲ್ಲಿ ಜನರೊಂದಿಗೆ ಸಂವಹನ ನಡೆಸುತ್ತಿದ್ದಾಗ ಈ ಭಾಗದ ರಸ್ತೆಗಳನ್ನು ದುರಸ್ತಿಪಡಿಸುವಂತೆ ಆಗ್ರಹಿಸಿದ್ದಾರೆ.

ಈ ವೇಳೆ ಸಚಿವರು ಸಭೆಯಲ್ಲಿದ್ದ ಲೋಕೋಪಯೋಗಿ ಇಲಾಖೆಯ ಮುಖ್ಯ ಎಂಜಿನಿಯರ್ ಕಡೆಗೆ ತಿರುಗಿ, ‘ನನ್ನ ಕ್ಷೇತ್ರದಲ್ಲಿ ಕತ್ರಿನಾ ಕೈಫ್ ಅವರ ಕೆನ್ನೆಯಂತಹ ರಸ್ತೆ ಮಾಡಬೇಕು’ ಎಂದು ತಮಾಷೆಯಾಗಿ ಹೇಳಿದ್ದಾರೆ. ಬಳಿಕ ಮತ್ತೊಮ್ಮೆ ಗುಢಾ ತಮ್ಮ ಮತದಾರರ ಹೆಚ್ಚಿನ ಮೆಚ್ಚುಗೆಯನ್ನು ಪಡೆಯಲು ಹೇಳಿಕೆಯನ್ನು ಪುನರಾವರ್ತಿಸಿದ್ದಾರೆ.

ರಾಜಕಾರಣಿಗಳು ರಸ್ತೆಗಳನ್ನು ನಟಿಯರ ಕೆನ್ನೆಗೆ ಹೋಲಿಸುವುದು ಹೊಸದೇನಲ್ಲ. 2005 ರಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಬಿಹಾರದ ರಸ್ತೆಗಳನ್ನು ಹೇಮಾ ಮಾಲಿನಿ ಅವರ ಕೆನ್ನೆಯಂತೆ ನುಣುಪಾಗಿ ಮಾಡುವ ಭರವಸೆ ನೀಡಿದಾಗ ಗದ್ದಲ ಉಂಟಾಗಿತ್ತು.

ಮಧ್ಯ ಪ್ರದೇಶದ ಕಾನೂನು ಸಚಿವ ಪಿಸಿ ಶರ್ಮಾ ಅವರು 2019 ರಲ್ಲಿ ರಾಜ್ಯದ ಹೊಂಡಗಳಿಂದ ಕೂಡಿದ ರಸ್ತೆಗಳನ್ನು 'ಡ್ರೀಮ್ ಗರ್ಲ್' ಸ್ಟಾರ್‌ನ ಕೆನ್ನೆಯಂತೆ "ಸುಂದರ" ಗೊಳಿಸಲಾಗುವುದು ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಬೆಂಗಳೂರು ಬಲು ದುಬಾರಿ: ನಮ್ ಊರಲ್ಲಿ ಬಟ್ಟೆ ಇಸ್ತ್ರಿಗೆ ಬರೀ 5 ರೂಪಾಯಿ, ಆದ್ರೆ ಇಲ್ಲಿ 20 ರೂಪಾಯಿ!: ನೊಯ್ಡಾ ನಿವಾಸಿ ಅಚ್ಚರಿ!

SCROLL FOR NEXT