ದೇಶ

ಜಮ್ಮು ಮತ್ತು ಕಾಶ್ಮೀರ: ಸೇನೆ-ಪೊಲೀಸ್ ಜಂಟಿ ಕಾರ್ಯಾಚರಣೆ; ಮೂರು ಉಗ್ರರು ಹತ

Srinivasamurthy VN

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಮತ್ತು ಪೊಲೀಸರು ಭರ್ಜರಿ ಜಂಟಿ ಕಾರ್ಯಾಚರಣೆ ನಡೆಸಿದ್ದು, ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

ರಾಜಧಾನಿ ಶ್ರೀನಗರದ ರಾಮ್‌ಭಾಗ್‌ ಪ್ರದೇಶದಲ್ಲಿ ಈ ಎನ್‌ಕೌಂಟರ್‌ ನಡೆದಿದ್ದು, ಘಟನೆಯಲ್ಲಿ ಕನಿಷ್ಠ ಮೂವರು ಉಗ್ರರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದು, ಬುಧವಾರ ರಾಮ್‌ಭಾಗ್‌ ಪ್ರದೇಶದಲ್ಲಿ ಉಗ್ರರ ಇರುವಿಕೆ ಕುರಿತು ಮಾಹಿತಿ ಬಂದಿದೆ. ಕೂಡಲೇ ಸೇನೆ ಮತ್ತು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿ ಅಲರ್ಟ್ ಮಾಡಲಾಗಿತ್ತು. ಬಳಿಕ ಕಾರ್ಯಾಚರಣೆಗೆ ಇಳಿಯುತ್ತಿದ್ದಂತೆಯೇ ಉಗ್ರರು ಸೇನೆಯನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದರು. ಸೇನೆ ಮತ್ತು ಪೊಲೀಸರು ಕೂಡ ಪ್ರತಿದಾಳಿ ನಡೆಸಿದ್ದು ಈ ವೇಳೆ ಮೂವರು ಉಗ್ರರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.

ಪ್ರಸ್ತುತ ಘಟನಾ ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಮುಂಜಾಗ್ರತಾ ಕ್ರಮವಾಗಿ ರಾಮ್ ಭಾಗ್ ಪ್ರದೇಶದ ಸುತ್ತಮುತ್ತಲ ಪ್ರದೇಶಗಳನ್ನು ಸೇನೆ ವಶಕ್ಕೆ ಪಡೆದುಕೊಂಡಿದ್ದು ಕೂಂಬಿಂಗ್ ಕಾರ್ಯಾಚರಣೆ ನಡೆಸಿದೆ.

SCROLL FOR NEXT