ಸಾಂದರ್ಭಿಕ ಚಿತ್ರ 
ದೇಶ

ಇಡಬ್ಲ್ಯೂಎಸ್ ಮೀಸಲಾತಿಗೆ 8 ಲಕ್ಷ ರೂ. ವಾರ್ಷಿಕ ಆದಾಯ ಮಿತಿ ಮರುಪರಿಶೀಲನೆ: ಸುಪ್ರೀಂಗೆ ಕೇಂದ್ರ

ನೀಟ್‌- ಸ್ನಾತಕೋತ್ತರ ವೈದ್ಯಕೀಯ ಪ್ರವೇಶಕ್ಕಾಗಿ ಆರ್ಥಿಕವಾಗಿ ಹಿಂದುಳಿದ ವರ್ಗದವರ (ಇಡಬ್ಲ್ಯೂಎಸ್) ಮೀಸಲಾತಿಗೆ ನಿಗದಿಪಡಿಸಿರುವ 8 ಲಕ್ಷ ರೂಪಾಯಿ ವಾರ್ಷಿಕ ಆದಾಯದ ಮಾನದಂಡವನ್ನು ಮರು ಪರಿಶೀಲನೆ ಮಾಡುವುದಾಗಿ

ನವದೆಹಲಿ: ನೀಟ್‌- ಸ್ನಾತಕೋತ್ತರ ವೈದ್ಯಕೀಯ ಪ್ರವೇಶಕ್ಕಾಗಿ ಆರ್ಥಿಕವಾಗಿ ಹಿಂದುಳಿದ ವರ್ಗದವರ (ಇಡಬ್ಲ್ಯೂಎಸ್) ಮೀಸಲಾತಿಗೆ ನಿಗದಿಪಡಿಸಿರುವ 8 ಲಕ್ಷ ರೂಪಾಯಿ ವಾರ್ಷಿಕ ಆದಾಯದ ಮಾನದಂಡವನ್ನು ಮರು ಪರಿಶೀಲನೆ ಮಾಡುವುದಾಗಿ ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್, ಸೂರ್ಯ ಕಾಂತ್ ಮತ್ತು ವಿಕ್ರಮ್ ನಾಥ್ ಅವರ ಪೀಠಕ್ಕೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಈ ಮಾಹಿತಿ ನೀಡಿದ್ದು, ಇಡಬ್ಲ್ಯೂಎಸ್ ಮಾನದಂಡಗಳನ್ನು ನಿರ್ಧರಿಸಲು ಸಮಿತಿಯನ್ನು ರಚಿಸಲಾಗುವುದು ಮತ್ತು ಇದಕ್ಕೆ ನಾಲ್ಕು ವಾರಗಳ ಕಾಲಾವಕಾಶ ಬೇಕು ಎಂದು ಹೇಳಿದ್ದಾರೆ.

ಈ ಹಿಂದೆ ನ್ಯಾಯಾಲಯಕ್ಕೆ ನೀಡಿದ ಭರವಸೆಯಂತೆ ನೀಟ್(ಪಿಜಿ) ಕೌನ್ಸೆಲಿಂಗ್ ಅನ್ನು ಇನ್ನೂ ನಾಲ್ಕು ವಾರಗಳ ಕಾಲ ಮುಂದೂಡಲಾಗುವುದು ಎಂದು ಮೆಹ್ತಾ ಅವರು ಸುಪ್ರೀಂ ಕೋರ್ಟ್ ಗೆ ತಿಳಿಸಿದರು.

ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶದಲ್ಲಿ ಇತರೆ ಹಿಂದುಳಿದ ವರ್ಗಕ್ಕೆ(ಒಬಿಸಿ) ಶೇ. 27 ಮತ್ತು ಇಡಬ್ಲ್ಯುಎಸ್ ವರ್ಗಕ್ಕೆ ಶೇ. 10 ಮೀಸಲಾತಿ ನೀಡುವ ಕೇಂದ್ರ ಮತ್ತು ವೈದ್ಯಕೀಯ ಕೌನ್ಸೆಲಿಂಗ್ ಸಮಿತಿ(ಎಂಸಿಸಿ)ಯ ಜುಲೈ 29 ರಂದು ಹೊರಡಿಸಿದ್ದ ಸೂಚನೆಯನ್ನು ಪ್ರಶ್ನಿಸಿ ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಿತು.

ಈ ವೇಳೆ ಇಡಬ್ಲ್ಯೂಎಸ್ ಕೋಟಾವು ಅತ್ಯಂತ ಸಕ್ರಿಯಗೊಳಿಸುವ ಮತ್ತು ಪ್ರಗತಿಪರ ರೀತಿಯ ಮೀಸಲಾತಿಯಾಗಿದೆ. ಕೇಂದ್ರ ಸರ್ಕಾರದ ಈ ಪ್ರಯತ್ನವನ್ನು ಎಲ್ಲಾ ರಾಜ್ಯಗಳು ಬೆಂಬಲಿಸಬೇಕು ಎಂದು ನ್ಯಾಯಮೂರ್ತಿ ಕಾಂತ್ ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!