ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿಂದು ಕೊರೋನಾ ಅಬ್ಬರ ಇಳಿಕೆ: ದೇಶದಲ್ಲಿಂದು 9,119 ಹೊಸ ಕೇಸ್ ಪತ್ತೆ, 396 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗಿದ್ದು, ದೇಶದಲ್ಲಿ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 9,119 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 396 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗಿದ್ದು, ದೇಶದಲ್ಲಿ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 9,119 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 396 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಗುರುವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,45,44,882ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,66,980ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,09,940ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 10,264 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,39,67,962ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 11,57,697 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 63,47,74,225 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,19,38,44,741 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬೆಂಜಮಿನ್ ನೆತನ್ಯಾಹು ಮಾಡಿದ ಫೋನ್ ಕರೆಯೇ ಅಮೆರಿಕ-ಇರಾನ್ ಶಾಂತಿ ಮಾತುಕತೆ ಹಳಿತಪ್ಪುವಂತೆ ಮಾಡಿತು'

ನೋಯ್ಡಾ: ಹಿಂಸಾಚಾರಕ್ಕೆ ತಿರುಗಿದ ಕಾರ್ಮಿಕರ ಪ್ರತಿಭಟನೆ; ಕಲ್ಲು ತೂರಾಟ, ಬೆಂಕಿ ಹಚ್ಚಿ ಆಕ್ರೋಶ

ಮಹಿಳಾ ಕೋಟಾ ಕಾನೂನು ಸಮಾನತೆಯ ಭಾರತಕ್ಕೆ ಪ್ರಮುಖ: ಪ್ರಧಾನಿ ಮೋದಿ

ಲೆಕ್ಕಾ ಕೊಡಿ.. ಹೈ ಡ್ರಾಮಾ; ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ವಚನಾನಂದ ಶ್ರೀ ಉಚ್ಛಾಟನೆ

ಬಿಗ್ ಬಾಸ್ ಖ್ಯಾತಿಯ ರಕ್ಷಿತಾ ಶೆಟ್ಟಿಯ 'ಪಟಾಕಿ ಕಿಚನ್' ಉದ್ಘಾಟಿಸಿದ ಮ್ಯೂಟೆಂಟ್ ರಘು! ಏನಿದರ ವಿಶೇಷತೆ? Video ನೋಡಿ..

SCROLL FOR NEXT