ಸಾಂದರ್ಭಿಕ ಚಿತ್ರ 
ದೇಶ

ತಮಿಳುನಾಡು: ಲೈಂಗಿಕ ಕಿರುಕುಳದಿಂದ 12ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಬಳಿಕ ಸಾವಿಗೆ ಶರಣಾದ ಶಿಕ್ಷಕ

ತಮಿಳುನಾಡಿನ ಕರೂರಿನಲ್ಲಿ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ 12ನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ ಕೆಲವು ದಿನಗಳ ನಂತರ ನಿನ್ನೆ ತಡರಾತ್ರಿ ಆರೋಪಿತ ಗಣಿತ ಶಿಕ್ಷಕ ಸಹ ಆತ್ಮಹತ್ಯೆ...

ಕರೂರ್​​: ತಮಿಳುನಾಡಿನ ಕರೂರಿನಲ್ಲಿ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ 12ನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ ಕೆಲವು ದಿನಗಳ ನಂತರ ನಿನ್ನೆ ತಡರಾತ್ರಿ ಆರೋಪಿತ ಗಣಿತ ಶಿಕ್ಷಕ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸರವಣನ್(42) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ. ಸಾವಿಗೂ ಮುನ್ನ ಶಿಕ್ಷಕ ಡೆತ್​​ನೋಟ್​ ಅನ್ನು ಬರೆದಿದ್ದು, ಇದರಲ್ಲಿ ವಿದ್ಯಾರ್ಥಿನಿ ಮೃತಪಟ್ಟ ನಂತರ ಆಕೆಯ ಸಾವಿನ ಬಗ್ಗೆ ಜನರು ಮತ್ತು ವಿದ್ಯಾರ್ಥಿಗಳು ಗೇಲಿ ಮಾಡುತ್ತಿದ್ದರು. ಇದರಿಂದ ಮುಜುಗರಕ್ಕೊಳಗಾಗಿ ಹಾಗೂ ಹುಡುಗಿ ಯಾರ ಹೆಸರನ್ನೂ ಹೇಳದಿದ್ದರೂ ನನ್ನ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದರು ಎಂದು ಪತ್ರದಲ್ಲಿ ಬರೆಯಲಾಗಿದೆ.

ಕಳೆದ ವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ 12ನೇ ತರಗತಿ ವಿದ್ಯಾರ್ಥಿನಿ ಡೆತ್​ನೋಟ್​​ನಲ್ಲಿ​​ ಹೀಗೆ ಬರೆದಿದ್ದಾಳೆ. ಕರೂರ್ ಜಿಲ್ಲೆಯಲ್ಲಿ ಲೈಂಗಿಕ ಕಿರುಕುಳದಿಂದ ಸಾಯುವ ಕೊನೆಯ ಹುಡುಗಿ ನಾನೇ ಆಗಿರಬೇಕು. ನನ್ನ ಈ ನಿರ್ಧಾರಕ್ಕೆ ಕಾರಣ ಯಾರು ಎಂದು ಹೇಳಲು ನನಗೆ ಭಯವಾಗಿದೆ. ನಾನು ಈ ಭೂಮಿಯ ಮೇಲೆ ದೀರ್ಘಕಾಲ ಬದುಕಲು ಮತ್ತು ಇತರರಿಗೆ ಸಹಾಯ ಮಾಡಲು ಬಯಸಿದ್ದೆ, ಆದರೆ ಈಗ ನಾನು ಈ ಪ್ರಪಂಚವನ್ನು ಬೇಗನೆ ತೊರೆಯಬೇಕಾಗಿದೆ ಎಂದು ಬರೆಯಲಾಗಿತ್ತು.

ತನಿಖೆಯ ಭಾಗವಾಗಿ, ಪೊಲೀಸರು ಈಗಾಗಲೇ ಆಕೆಯ ಶಾಲೆಯ ಶಿಕ್ಷಕರು ಮತ್ತು ಸಿಬ್ಬಂದಿಯನ್ನು ಪ್ರಶ್ನಿಸಿದ್ದಾರೆ. ಸರವಣನ್ ಅವರನ್ನೂ ಪ್ರಶ್ನಿಸಲಾಗಿತ್ತು. ಇದರಿಂದ ಒತ್ತಡಕ್ಕೊಳಗಾದ ಅವರು ಈಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗಣಿತ ಶಿಕ್ಷಕನ ಮೇಲೆ ಯಾವುದೇ ಅನುಮಾನವಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಆದರೂ ಸರವಣನ್ ನಿನ್ನೆ ರಾತ್ರಿ ತಿರುಚ್ಚಿಯಲ್ಲಿರುವ ತಮ್ಮ ಮಾವನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT