ನವಜೋತ್ ಸಿಂಗ್ ಸಿಧು 
ದೇಶ

ಪಂಜಾಬ್​ ಸರ್ಕಾರಕ್ಕೆ ಉಪವಾಸ ಸತ್ಯಾಗ್ರಹದ ಬೆದರಿಕೆ ಹಾಕಿದ ನವಜೋತ್ ಸಿಂಗ್ ಸಿಧು

ರಾಜ್ಯ ಸರ್ಕಾರವು ಮಾದಕ ದ್ರವ್ಯ ಹಾವಳಿ ಮತ್ತು ಹತ್ಯೆ ಘಟನೆಯ ವರದಿಗಳನ್ನು ಸಾರ್ವಜನಿಕಗೊಳಿಸದಿದ್ದರೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು ಹೇಳಿದ್ದಾರೆ.

ಚಂಡೀಗಢ: ರಾಜ್ಯ ಸರ್ಕಾರವು ಮಾದಕ ದ್ರವ್ಯ ಹಾವಳಿ ಮತ್ತು ಹತ್ಯೆ ಘಟನೆಯ ವರದಿಗಳನ್ನು ಸಾರ್ವಜನಿಕಗೊಳಿಸದಿದ್ದರೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು ಹೇಳಿದ್ದಾರೆ.

ಮಾದಕ ವ್ಯಸನದ ಕುರಿತು ವಿಶೇಷ ಕಾರ್ಯಪಡೆಯ ವರದಿಯನ್ನು ಸಾರ್ವಜನಿಕಗೊಳಿಸಬೇಕು. ಅಲ್ಲದೇ ಮಾದಕ-ಭಯೋತ್ಪಾದನೆಗೆ ಕಾರಣವಾದ ದೊಡ್ಡ ಮೀನನನ್ನು ಹಿಡಿಯಲು ಕಾಲಮಿತಿಯ ತನಿಖೆಯನ್ನು ಪ್ರಾರಂಭಿಸಬೇಕು ಎಂದು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಒತ್ತಾಯಿಸಿದ್ದಾರೆ.

ನವಜೋತ್ ಸಿಂಗ್ ಸಿಧು ಅವರು ಮೊಗಾದ ವಾಘಾ ಪುರಾಣದ ನ್ಯೂ ದಾನ ಮಂಡಿಯಲ್ಲಿ ಪಕ್ಷದ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ರ್ಯಾಲಿಯಲ್ಲಿ ಸಿಎಂ ಚರಂಜಿತ್ ಸಿಂಗ್ ಚನ್ನಿ ಕೂಡ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಸಿಎಂ ಇರುವವರೆಗೂ ಸಿದ್ದು ಅವರೊಂದಿಗೆ ಕಾಣಿಸಿಕೊಂಡರು, ಆದರೆ ಚನ್ನಿ ಹೋದ ತಕ್ಷಣ ಸಿದ್ದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಎರಡು ತಿಂಗಳ ಹಿಂದೆ ಸರ್ಕಾರ ನೀಡಿದ್ದ ಭರವಸೆಯನ್ನು ಈಗ ಪಂಜಾಬ್ ಸರ್ಕಾರ ಡ್ರಗ್ಸ್ ವಿಚಾರದಲ್ಲಿ ಬಹಿರಂಗ ಪಡಿಸದಿದ್ದಲ್ಲಿ, ಅಕ್ರಮ ಎಸಗಿದ ಸರ್ಕಾರದ ವಿರುದ್ಧ ಆಮರಣಾಂತ ಧರಣಿ ನಡೆಸುತ್ತೇವೆ ಎಂದು ಸಿಎಂ ಚರಣ್‌ಜಿತ್‌ ಸಿಂಗ್‌ ಚನ್ನಿ ಹೆಸರನ್ನು ಪ್ರಸ್ತಾಪಿಸದೆ ಸಿದ್ದು ಹೇಳಿದರು.

ನಾಲ್ಕು ವಾರಗಳಲ್ಲಿ ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾವನ್ನು ತೊಡೆದು ಹಾಕುವುದಾಗಿ 2017ರಲ್ಲಿ ಕಾಂಗ್ರೆಸ್ ಜನರಿಗೆ ಭರವಸೆ ನೀಡಿತ್ತು. ಆದರೆ 2017ರಿಂದ 2020 ರವರೆಗಿನ ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋ (ಎನ್ ಸಿಆರ್ ಬಿ) ವರದಿಗಳ ಪ್ರಕಾರ, ಪಂಜಾಬ್ ಸತತ ನಾಲ್ಕು ವರ್ಷಗಳಿಂದ ಎನ್ ಡಿಪಿಎಸ್ ನಲ್ಲಿ ಅಪರಾಧ ದರದಲ್ಲಿ ಅಗ್ರ ಸ್ಥಾನವನ್ನು ನಿರಂತರವಾಗಿ ಉಳಿಸಿಕೊಂಡಿದೆ ಎಂದು ಸಿಧು ಸರಣಿ ಟ್ವೀಟ್ ಗಳಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT