ರೈಲು ಸ್ಟಂಟ್ಸ್ 
ದೇಶ

ಚಲಿಸುತ್ತಿರುವ ರೈಲಿನಲ್ಲಿ ವಿದ್ಯಾರ್ಥಿನಿಯಿಂದ ಅಪಾಯಕಾರಿ 'ಸ್ಟಂಟ್ಸ್'; ಆಘಾತಕಾರಿ ವಿಡಿಯೋ ವೈರಲ್

ರಸ್ತೆಯಲ್ಲಿ ಅಥವಾ ಅನೇಕ ಸ್ಥಳಗಳಲ್ಲಿ ಅಪಾಯಕಾರಿ ಸಾಹಸಗಳನ್ನು ಮಾಡುವ ಜನರನ್ನು ನೋಡಿರುತ್ತೀರೀ. ನಿಜವಾಗಿಯೂ ರಾತ್ರೋರಾತ್ರಿ ಫೇಮಸ್ ಆಗಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಸ್ಟಂಟ್‌ಗಳನ್ನು ಮಾಡುತ್ತಾರೆ.

ಚೆನ್ನೈ: ರಸ್ತೆಯಲ್ಲಿ ಅಥವಾ ಅನೇಕ ಸ್ಥಳಗಳಲ್ಲಿ ಅಪಾಯಕಾರಿ ಸಾಹಸಗಳನ್ನು ಮಾಡುವ ಜನರನ್ನು ನೋಡಿರುತ್ತೀರೀ. ನಿಜವಾಗಿಯೂ ರಾತ್ರೋರಾತ್ರಿ ಫೇಮಸ್ ಆಗಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಸ್ಟಂಟ್‌ಗಳನ್ನು ಮಾಡುತ್ತಾರೆ. 

ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿಡಿಯೋದಲ್ಲಿ ಶಾಲಾ ವಿದ್ಯಾರ್ಥಿನಿ ಹಾಗೂ ವಿದ್ಯಾರ್ಥಿ ಚಲಿಸುತ್ತಿರುವ ರೈಲಿನಿಂದ ಮಾರಣಾಂತಿಕ ಸಾಹಸಗಳನ್ನು ಪ್ರದರ್ಶಿಸುತ್ತಿರುವುದನ್ನು ಕಾಣಬಹುದು. ಚೆನ್ನೈನ ಉಪನಗರದಲ್ಲಿರುವ ಕವರಪೆಟ್ಟೈ ರೈಲು ನಿಲ್ದಾಣದಲ್ಲಿ ನಡೆದಿರುವ ಈ ಘಟನೆ ಜನರಲ್ಲಿ ಅಚ್ಚರಿ ಮೂಡಿಸಿದೆ.

ವೀಡಿಯೋದಲ್ಲಿ ಶಾಲಾ ಸಮವಸ್ತ್ರ ಧರಿಸಿದ ಬಾಲಕ ಮತ್ತು ಬಾಲಕಿ ಚಲಿಸುತ್ತಿರುವ ರೈಲಿನಲ್ಲಿ ಓಡುತ್ತಿರುವುದನ್ನು ಕಾಣಬಹುದು. ರೈಲಿನ ವೇಗ ಹೆಚ್ಚಾದಂತೆ, ವಿದ್ಯಾರ್ಥಿಗಳು ಬಾಗಿಲಿಗೆ ಜೋಡಿಸಲಾದ ಬಾರ್ ಅನ್ನು ಹಿಡಿದುಕೊಂಡು. ರೋಮಾಂಚನಕ್ಕಾಗಿ ಪ್ಲಾಟ್‌ಫಾರ್ಮ್‌ಗೆ ಅಡ್ಡಲಾಗಿ ತಮ್ಮ ಪಾದಗಳನ್ನು ಎಳೆಯುವುದನ್ನು ಕಾಣಬಹುದು. ನಂತರ ರೈಲು ನಿಲ್ದಾಣದಿಂದ ಹೊರಡುವಾಗ, ಇಬ್ಬರೂ ರೈಲಿನೊಳಗೆ ಏರುತ್ತಾರೆ. ವಿಡಿಯೋವನ್ನು  ಪತ್ತೆಯಾಗಿಲ್ಲ ಆದರೆ ಕೊರುಕ್ಕುಪೇಟೆ ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT