ದೇಶ

ಕೋರ್ಟ್ ಆದೇಶದಂತೆ ತನಿಖೆಗೆ ಸಹಕರಿಸುತ್ತೇನೆ: ಮುಂಬೈನಲ್ಲಿ ಪರಮ್‌ ಬೀರ್ ಸಿಂಗ್‌ ಹೇಳಿಕೆ

Manjula VN

ಮುಂಬೈ: ಮುಂಬೈ ಕೋರ್ಟ್‌ನಿಂದ ಘೋಷಿತ ಅಪರಾಧಿ ಎಂದು ಕರೆಸಿಕೊಂಡಿರುವ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಅವರು ನ್ಯಾಯಾಲಯದ ನಿರ್ದೇಶನದಂತೆ ತನಿಖೆಗೆ ಸಹಕಾರ ನೀಡಲು ಗುರುವಾರ ಮುಂಬೈಗೆ ಆಗಮಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಸುಲಿಗೆ ಪ್ರಕರಣದಲ್ಲಿ ಹಲವು ಆರೋಪಗಳನ್ನು ಎದುರಿಸುತ್ತಿರುವ ಪರಮ್ ಬೀರ್ ಸಿಂಗ್ ಅವರು, ತಾವು ಚಂಡೀಗಡದಲ್ಲಿ ಇದ್ದುದ್ದಾಗಿ ಹೇಳಿದ್ದು, ನ್ಯಾಯಾಲಯದ ನಿರ್ದೇಶನದಂತೆ ತನಿಖೆಗೆ ಸಹಕರಿಸುವುದಾಗಿ ಹೇಳಿದ್ದಾರೆ.

ನ್ಯಾಯಾಲಯದ ಆದೇಶದಂತೆ ತನಿಖೆಗೆ ಸಹಕಾರ ನೀಡಲು ಮುಂಬೈಗೆ ಆಗಮಿಸಿದ್ದೇನೆ. ತನಿಖೆಗೆ ಸಹಕರಿಸುತ್ತೇನೆಂದು ತಿಳಿಸಿದ್ದಾರೆ.

ವಿಮಾನ ನಿಲ್ದಾಣದಿಂದ ಹೊರಬಂದ ಸಿಂಗ್ ಅವರು, ಮುಂಬೈ ಪೊಲೀಸ್ ಅಪರಾಧ ವಿಭಾಗದ ಘಟಕ -11 ರ ಮುಂದೆ ಇಂದು ಹಾಜರಾದರು,

ಗೋರೆಗಾಂವ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.

ಮುಂಬೈ ಪೊಲೀಸ್‌ ಆಯುಕ್ತ ಹುದ್ದೆಯಿಂದ ವರ್ಗಾವಣೆಯಾದ ಮತ್ತು ಆಗಿನ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ ನಂತರ ಮೇ ತಿಂಗಳಿನಿಂದ ಅವರು ಕೆಲಸಕ್ಕೆ ಹಾಜರಾಗಿಲ್ಲ.

ಬಂಧನದಿಂದ ರಕ್ಷಣೆ ಕೋರಿ ಅವರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಉದ್ಯಮಿ ಮುಖೇಶ್‌ ಅಂಬಾನಿ ಅವರ ಮನೆ ಬಳಿ ನಿಲ್ಲಿಸಿದ್ದ ಎಸ್‌ಯುವಿಯಲ್ಲಿ ಸ್ಫೋಟಕ ಸಾಮಗ್ರಿಗಳು ಪತ್ತೆಯಾದ ಬಳಿಕ ಮುಂಬೈ ಪೊಲೀಸ್‌ ಆಧಿಕಾರಿ ಸಚಿನ್‌ ವಾಜೆ ಅವರನ್ನು ಬಂಧಿಸಲಾಗಿತ್ತು. ಅನಂತರ ಪರಮ್‌ ಬೀರ್‌ ಸಿಂಗ್ ಅವರನ್ನು ವರ್ಗಾವಣೆ ಮಾಡಲಾಗಿತ್ತು.

SCROLL FOR NEXT