ಮೋದಿ-ಸುಬ್ರಮಣಿಯನ್ ಸ್ವಾಮಿ 
ದೇಶ

ಮೋದಿ ನೇತೃತ್ವದ ಸರ್ಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದೆ: ಸುಬ್ರಮಣಿಯನ್ ಸ್ವಾಮಿ

ಪಶ‍್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಆಡಳಿತ ಶೈಲಿಯನ್ನು ಹೊಗಳಿದ 24 ಗಂಟೆಗಳ ನಂತರ ಬಿಜೆಪಿ ನಾಯಕ, ರಾಜ್ಯಸಭಾ ಸದಸ್ಯ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ...

ನವದೆಹಲಿ: ಪಶ‍್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಆಡಳಿತ ಶೈಲಿಯನ್ನು ಹೊಗಳಿದ 24 ಗಂಟೆಗಳ ನಂತರ ಬಿಜೆಪಿ ನಾಯಕ, ರಾಜ್ಯಸಭಾ ಸದಸ್ಯ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಆರ್ಥಿಕ ಪರಿಸ್ಥಿತಿ ನಿರ್ವಹಣೆ ರಕ್ಷಣೆ, ನೆರೆಹೊರೆ ದೇಶಗಳೊಂದಿಗೆ ಸಂಬಂಧಸುಧಾರಣೆ ಸೇರಿದಂತೆ ಆಡಳಿತದ ಎಲ್ಲ ರಂಗಗಳಲ್ಲೂ ಮೋದಿ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ನಾಯಕ ಆರೋಪಿಸಿದ್ದಾರೆ.

ಆಫ್ಘಾನಿಸ್ತಾನದ ಪರಿಸ್ಥಿತಿ ನಿರ್ವಹಣೆ, ಪೇಗಾಸಿಸ್ ಗೂಢಚಾರಿಕೆ ಪ್ರಕರಣದಲ್ಲೂ ಸರ್ಕಾರ ವಿವೇಚನಾರಹಿತ ಹೆಜ್ಜೆ ಇಟ್ಟಿದೆ ಎಂದು ಸ್ವಾಮಿ ದೂರಿದ್ದಾರೆ. ಪ್ರಸಕ್ತ ನರೇಂದ್ರ ಮೋದಿ ಆಡಳಿತದಲ್ಲಿ ಕಾಶ್ಮೀರ ಅಭಿವೃದ್ದಿ ಕಾಣುವ ಬದಲಿಗೆ ಕತ್ತಲೆಯಲ್ಲಿ ಮುಳುಗಿದೆ ಎಂದಿದ್ದಾರೆ.

ಕಳೆದ 24 ಗಂಟೆಗಳ ಹಿಂದೆ ದೆಹಲಿಯಲ್ಲಿ ಸುಬ್ರಹ್ಮಮಣಿಯನ್ ಸ್ವಾಮಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ, ಅವರ ನಾಯಕತ್ವವನ್ನು ಮನಸಾರೆ ಹೊಗಳಿದ್ದರು.

ಮಮತಾ ಬ್ಯಾನರ್ಜಿ ಮುತ್ಸದ್ದಿ ನಾಯಕಿಯಾಗಿದ್ದು, ಜಯಪ್ರಕಾಶ್ ನಾರಾಯಣ್ ರಾಜೀವ್ ಗಾಂಧಿ ಮತ್ತು ಮುರಾರ್ಜಿ ದೇಸಾಯಿ, ಪಿ.ವಿ. ನರಸಿಂಹ ರಾವ್ ಅವರ ರೀತಿಯಲ್ಲಿ ಉತ್ತಮ ಆಡಳಿತ, ಉತ್ತಮ ನಾಯಕತ್ವ ಗುಣ ಹೊಂದಿದ್ದಾರೆ ಎಂದೂ ಸ್ವಾಮಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT